ಬೆಂಗಳೂರು: ರಾಜ್ಯಾದ್ಯಂತ‌ ಮಳೆ ಅಬ್ಬರ ಮುಂದುವರಿದಿದೆ. ಕರ್ನಾಟಕ ಕರಾವಳಿಯಲ್ಲಿ ಭಾನುವಾರ ವ್ಯಾಪಕವಾಗಿ ಮಧ್ಯಮದಿಂದ ಭಾರಿ ಮಳೆಯಾಗಲಿದೆ. ಪ್ರತ್ಯೇಕ ಸ್ಥಳದಲ್ಲಿ ಚದುರಿದ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಮಲೆನಾಡು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ, ಕೆಲವಡೆ ಮಧ್ಯಮ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಮುಖ್ಯವಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಮಂಡ್ಯ, ರಾಮನಗರ, ಮೈಸೂರು ಹಾಗೂ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು, ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಇನ್ನೂ ಉತ್ತರ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಆದರೆ ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ರಾಯಚೂರು, ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ಯಾದಗಿರಿ, ಬಾಗಲಕೋಟೆಯಲ್ಲಿ ಮಳೆಯಾಗಲಿದೆ.

ಮಲೆನಾಡು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಭಾಗದಲ್ಲಿ ಮಳೆಯಾಗಲಿದ್ದು, ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ.