ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಸಾಮಾನ್ಯವಾಗಿದ್ದು, ಕರಾವಳಿ ಹಾಗೂ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ನಿರಂತರ ಗಾಳಿಯ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಸುತ್ತಮುತ್ತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಹಾಸನದಲ್ಲಿ ಸಾಧಾರಣ ಮಳೆಯಾಗಲಿದೆ. ಆದರೆ ಗಾಳಿಯ ವೇಗವು 40-50 ಕಿ.ಮೀ ತಲುಪಲಿದೆ.

ಇನ್ನೂ ದಕ್ಷಿಣ ಒಳನಾಡಿನ ಹಲವೆಡೆ ಗಾಳಿಯ ವೇಗವು 50 ಕಿ.ಮೀ ತಲುಪುವ ಸಾಧ್ಯತೆ ಇದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ ಸೇರಿದಂತೆ ಕೋಲಾರದಲ್ಲಿ ಮಳೆಯಾಗಲಿದೆ.

ಮೀನುಗಾರರಿಗೆ ಎಚ್ಚರಿಕೆ
ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವು ಗಂಟೆಗೆ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಸಮುದ್ರಕ್ಕಿಳಿಯುವ ಮುನ್ನ ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.