ಬೆಂಗಳೂರು: ವಾರಾಂತ್ಯದಲ್ಲಿ ಕರಾವಳಿಯಲ್ಲಿ ಮಳೆಯು ಅಬ್ಬರಿಸುವ ಸಾಧ್ಯತೆ ಇದೆ. ಶನಿವಾರ ಕರಾವಳಿ ಭಾಗದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಮಲೆನಾಡು ಮತ್ತು ಉತ್ತರ ಒಳನಾಡಿ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉಳಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಪ್ರತ್ಯೇಕವಾಗಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.
ಮುಖ್ಯವಾಗಿ ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನ ಸುತ್ತಮುತ್ತ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಯಾದಗಿರಿ, ರಾಯಚೂರು ಮತ್ತು ಕಲಬುರಗಿ , ಬೆಳಗಾವಿಯಲ್ಲಿ ಭಾರೀ ಮಳೆ ಸಾಧ್ಯತೆ ಇದೆ.
ಈ ಜಿಲ್ಲೆಗಳಲ್ಲಿ ಅಬ್ಬರಿಸುವ ವರುಣ
ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಐಎಂಡಿಯಿಂದ ಯೆಲ್ಲೋ ಅಲರ್ಟ್ ಘೋಷಣೆ

