ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದೊಂದಿಗೆ ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಲವಾದ ಮೇಲ್ಮೈ ಗಾಳಿಯೊಂದಿಗೆ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ  ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು  ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಬೆಂಗಳೂರು ನಗರ, ಬಳ್ಳಾರಿ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿಜಯನಗರದಲ್ಲಿ ಯಾವುದೇ ಮಳೆ ಮುನ್ಸೂಚನೆ ಇಲ್ಲ.

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬಾಗಲಕೋಟೆಯಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು,40-50 ಕಿ.ಮೀದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮಲೆನಾಡಿನ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.