ಬೆಂಗಳೂರು: ರಾಜ್ಯಾದ್ಯಂತ ಬುಧವಾರ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಪ್ರತ್ಯೇಕವಾಗಿ ಚದುರಿದಂತೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ರಾಮನಗರ, ಕೋಲಾರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ,ಚಾಮರಾಜನಗರದಲ್ಲೂ ಮಳೆಯಾಗಲಿದೆ.
ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯನಗರ, ರಾಯಚೂರು ಮತ್ತು ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿಯ ಉಡುಪಿ, ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಗುಡುಗು ಸಹಿತ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ ಸೇರಿದಂತೆ ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು ಶಿವಮೊಗ್ಗ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

