Ad

ಇಂದು ಉಡುಪಿ, ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಭಾರಿ ಮಳೆ!

ಜುಲೈ 11ರಂದು ಗುರುವಾರ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಪ್ರತ್ಯೇಕ ಕಡೆ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು: ಜುಲೈ 11ರಂದು ಗುರುವಾರ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಪ್ರತ್ಯೇಕ ಕಡೆ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad
300x250 2

ಉತ್ತರ ಒಳ ಕರ್ನಾಟಕದ ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಗಾಳಿಯ ವೇಗ ಸಹಿತ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಒಳಗಿನ ಕರ್ನಾಟಕದ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಮಾಹಿತಿ ನೀಡಿದೆ.

ಇನ್ನು ಜುಲೈ 12ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರ್ಗಿ, ಬೆಳಗಾವಿ ಜಿಲ್ಲೆಗಳಪ್ರತ್ಯೇಕ ಭಾರೀ ಮಳೆ ಮತ್ತು ನಿರಂತರ ಗಾಳಿಯ ವೇಗ ತಲುಪುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

Ad
Ad
Nk Channel Final 21 09 2023
Ad