ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಚದುರಿದ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ  ರೆಡ್‌ ಅಲರ್ಟ್‌ ಘೋಷಿಸಲಾಗಿದೆ.