ಬೆಂಗಳೂರು: ಜು.17ರಂದು ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಎಚ್ಚರಿಕೆ ಇದ್ದು, ಮಲೆನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ಮಲೆನಾಡು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರಿನಲ್ಲಿ ಮಳೆಯು ಅಬ್ಬರಿಸಲಿದೆ. ಕರಾವಳಿಯಲ್ಲಿ ವ್ಯಾಪಕ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ.

