ಬೆಂಗಳೂರು: ಕಳೆದ ಎರಡು ವಾರಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಇಂದು (ಸೆಪ್ಟೆಂಬರ್ 28, ಶನಿವಾರ) ರಾಜಧಾನಿ ಬೆಂಗಳೂರು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಇನ್ನು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮುಂದಿನ 5 ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದ್ದು, ಸೆಪ್ಟೆಂಬರ್ 30ರಂದು ಭಾರಿ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.