ಅಕ್ಟೋಬರ್ 5ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಲ್ಯಾಣ ಕರ್ನಾಟಕದಲ್ಲಿ ಮಳೆ ಅಬ್ಬರ ಇಳಿಕೆಯಾಗಿದ್ದರೂ, ಪ್ರವಾಹ ಭೀತಿ ಕಡಿಮೆಯಾಗಿಲ್ಲ.
ಬೆಳಗಾವಿ, ಕಲ್ಬುರ್ಗಿ, ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ತಿಳಿಸಿದ್ದು ನೆರೆಯ ರಾಜ್ಯ ಮಹಾರಾಷ್ಟ್ರ, ಕೇರಳ, ತಮಿಳು ನಾಡಿನಲ್ಲಿ ಕೂಡ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾದ್ಯತೆ ಇದೆ ಎನ್ನಲಾಗಿದೆ. ಇತ್ತ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಇಂದು ಕೂಡ ಮಳೆಯಾಗುವ ಸಾಧ್ಯತೆಯಿದೆ.

