ಕರ್ನಾಟಕದ ಕರಾವಳಿಯಲ್ಲಿ ಜುಲೈ 24ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಹಾಸನ ಜಿಲ್ಲೆಗಳಿಯೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.ವಿಜಯನಗರ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ವಿಜಯಪುರ, ರಾಯಚೂರು, ಕೊಪ್ಪಳದಲ್ಲೂ ಮಳೆಯಾಗಲಿದೆ.
ಆಗುಂಬೆ, ಭಾಗಮಂಡಲ, ಶೃಂಗೇರಿ, ಕೊಟ್ಟಿಗೆಹಾರ, ಕಮ್ಮರಡಿ, ಜಯಪುರ, ಕ್ಯಾಸಲ್ರಾಕ್, ಗೇರುಸೊಪ್ಪ, ಸಿದ್ದಾಪುರ, ಕಳಸ, ಲಿಂಗನಮಕ್ಕಿ, ಕೊಪ್ಪ, ಸೋಮವಾರಪೇಟೆ, ಮಂಕಿ, ಹೊನ್ನಾವರ, ಕೋಟ, ಗೋಕರ್ಣ, ಪೊನ್ನಂಪೇಟೆ, ನಾಪೊಕ್ಲು, ಶಿರಾಲಿ, ಅಂಕೋಲಾ, ಕಾರ್ಕಳದಲ್ಲಿ ಮಳೆಯಾಗಿದೆ.

