ಬೆಂಗಳೂರು: ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಬುಧವಾರದಂದು ಕರ್ನಾಟಕದ ಕರಾವಳಿಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ  ಸಾಧ್ಯತೆಯಿದೆ. ಮಲೆನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾದರೆ, ಉತ್ತರ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಮಧ್ಯಮ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಕೂಡಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ,ಶಿವಮೊಗ್ಗ, ಚಿಕ್ಕಮಗಳೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನಲ್ಲಿ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಉತ್ತರ ಒಳನಾಡಿನಲ್ಲಿ ಬಳ್ಳಾರಿ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್‌, ಧಾರವಾಡ, ಗದಗ,‌ ಕೊಪ್ಪಳ, ವಿಜಯಪುರದಲ್ಲಿ ಮಧ್ಯಮ ಮಳೆಯಾಗಲಿದೆ.

ಗುಡುಗು ಸಹಿತ ವ್ಯಾಪಕ ಮಳೆ ಸಾಧ್ಯತೆ

ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೀದರ್, ಕಲಬುರಗಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸಮುದ್ರಕ್ಕೆ ಇಳಿಯದಂತೆ ಸೂಚನೆ

ಸೆಪ್ಟೆಂಬರ್ 6 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.