ಕರ್ನಾಟಕದ 8 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್​,ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಹಾಸನ,ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆಯಲ್ಲಿ ಮಳೆಯಾಗಲಿದೆ.

ಬೀದರ್, ಸೋಮವಾರಪೇಟೆ, ಶೃಂಗೇರಿ, ಹುಮನಾಬಾದ್, ಮಂಠಾಳ, ಚಿಟಗುಪ್ಪ, ಕ್ಯಾಸಲ್​ರಾಕ್, ಲಿಂಗನಮಕ್ಕಿ, ಶೋರಾಪುರ, ಗೇರುಸೊಪ್ಪ, ಧರ್ಮಸ್ಥಳ, ಗಬ್ಬೂರು, ಕಲಬುರಗಿ, ಕೆಂಭಾವಿ, ಸೈದಾಪುರ, ಯಡ್ರಾಮಿಯಲ್ಲಿ ಮಳೆಯಾಗಿದೆ.