Bengaluru 23°C
Ad

ಕೋರ್ಟ್ ಕಲಾಪದ ನೇರ ಪ್ರಸಾರದ ದೃಶ್ಯ ಬಳಕೆಗೆ ತಡೆ !

Hc

ಬೆಂಗಳೂರು: ನ್ಯಾಯಾಲಯದ ಕಲಾಪದ ನೇರಪ್ರಸಾರದ ದೃಶ್ಯಗಳನ್ನು ಯಾವುದೇ ಖಾಸಗಿ ವೇದಿಕೆಗಳು ಬಳಸಬಾರದು ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.

ಕೋರ್ಟ್ ಕಲಾಪದ ದೃಶ್ಯಾವಳಿಗಳ ದುರ್ಬಳಕೆ ತಡೆಗೆ ಕ್ರಮ ಜರುಗಿಸಲು ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶಿಸುವಂತೆ ಕೋರಿ ಬೆಂಗಳೂರು ವಕೀಲರ ಸಂಘ (ಎಎಬಿ) ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್‌ಗೌಡರ್ ಅವರ ಪೀಠ ಈ ಆದೇಶ ಮಾಡಿತು.

ಪ್ರಸಾರದ ವಿಡಿಯೋ ಬಳಸಕೂಡದು. 2022ರ ಜ.1ರಂದು ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ಖಾಸಗಿ ಡಿಜಿಟಲ್ ಯಾವುದೇ ಖಾಸಗಿ ವೇದಿಕೆಗಳು ಹೈಕೋರ್ಟ್‌ನ ನೇರ ರಾಜ್ಯ ಹೈಕೋರ್ಟ್ ಜಾರಿಗೊಳಿಸಿರುವ ‘ಕರ್ನಾಟಕ ನ್ಯಾಯಾಲಯ ಕಲಾಪಗಳ ನೇರಪ್ರಸಾರ (ಲೈವ್ ಸ್ಟೀಮ್) ಮತ್ತು ರೆಕಾರ್ಡಿಂಗ್ ನಿಯಮಗಳು 2021 ರ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು.

ಹಾಗೆಯೇ ವಿವಿಧ ವೇದಿಕೆನಲ್ಲಿ ಬಳಕೆ ಮಾಡಲಾಗಿರುವ ಹೈಕೋರ್ಟ್ ಕಲಾಪದ ವಿಡಿಯೊಗಳನ್ನು ತಕ್ಷಣ ತೆಗೆದು ಹಾಕುವಂತೆ ಯೂಟ್ಯೂಬ್, ಫೇಸ್‌ಬುಕ್ ಹಾಗೂ ಎಕ್ಸ್ ಕಾರ್ಪ್ ಸಂಸ್ಥೆಗೆ ನ್ಯಾಯಪೀಠ ಇದೇ ವೇಳೆ ನಿರ್ದೇಶಿಸಿ ನೋಟಿಸ್ ಜಾರಿಗೊಳಿಸಿದೆ.

Ad
Ad
Nk Channel Final 21 09 2023