ಹುಬ್ಬಳ್ಳಿ: ಚನ್ನಗಿರಿ ಲಾಕಪ್ ಡೆತ್ ವಿಚಾರದಲ್ಲಿ ಸಿದ್ದರಾಮಯ್ಯನವರು ತೆಗೆದುಕೊಂಡ ನಿರ್ಧಾರವನ್ನು ಈ ಹಿಂದೆ ನಡೆದ ಯಾವುದೇ ವಿಚಾರದಲ್ಲಿಯೂ ತೆಗೆದುಕೊಂಡಿಲ್ಲ. ಯಾರು ಎಲ್ಲೇ ಗಲಭೆ ಮಾಡಿದರೂ ತಪ್ಪು, ಅದನ್ನು ಖಂಡಿಸಬೇಕು. ಅಲ್ಪಸಂಖ್ಯಾತರು ಗಲಭೆ ಮಾಡಿದ್ರೆ ಯಾಕೆ ಖಂಡನೆ ಮಾಡೋದಿಲ್ಲ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಿಎಂ ಸಿದ್ದರಾಮಯ್ಯ ಅವರನ್ನ ಪ್ರಶ್ನೆ ಮಾಡಿದ್ದಾರೆ.
Ad
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಜಲಿ, ನೇಹಾ ಹಿರೇಮಠ ಪ್ರಕರಣದಲ್ಲಿ ಪೊಲೀಸರ ಮೇಲೆ ಕ್ರಮ ಆಗಿಲ್ಲ. ಆದರೆ ಈ ಪ್ರಕರಣದಲ್ಲಿ ಪೊಲೀಸರ ಮೇಲೆ ಕ್ರಮ ಯಾಕೆ ಅಂತ ಪ್ರಶ್ನಿಸಿದ್ದಾರೆ.
Ad
ಸಿದ್ದರಾಮಯ್ಯನವರೇ ನಿಮ್ಮ ಈ ತುಷ್ಟಿಕರಣ ರಾಜಕೀಯದಿಂದ ಅರಾಜಕತೆ ಸೃಷ್ಟಿ ಆಗುತ್ತದೆ. ಯಾರೇ ಗಲಭೆ ಮಾಡಿದ್ರೂ ತಪ್ಪು, ಅದನ್ನು ಖಂಡಿಸಲೇಬೇಕು. ಆದ್ರೆ ಈ ವಿಚಾರದಲ್ಲಿ ಪೊಲೀಸರ ನೈತಿಕತೆ ಕುಗ್ಗಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.
Ad
Ad