Bengaluru 21°C
Ad

ಕರ್ನಾಟಕದ ಪ್ರಥಮ ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ

Cm (1)

ಬೆಂಗಳೂರು: ವಿದ್ಯುತ್ ಸ್ಥಾವರ ಉದ್ಘಾಟನೆ ಮೂಲಕ ಭವಿಷ್ಯದ ಬೇಡಿಕೆಗೆ ಅಗತ್ಯ ವಿದ್ಯುತ್ ಉತ್ಪಾದನೆಯತ್ತ ಮಹತ್ವದ ಹೆಜ್ಜೆ ಇಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಸ್ಥಾಪಿಸಿರುವ ರಾಜ್ಯದ ಮೊಟ್ಟ ಮೊದಲ 370 ಮೆಗಾವ್ಯಾಟ್ ಸಾಮರ್ಥ್ಯದ ಅನಿಲ ಆಧಾರಿತ ಯಲಹಂತ ಸಂಯುಕ್ತ ವಿದ್ಯುತ್ ಸ್ಥಾವರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಇಂದು(ಸೆ.24) ಲೋಕಾರ್ಪಣೆ ಮಾಡಿದರು.

ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಈ ಸ್ಥಾವರ ಉದ್ಘಾಟನೆ ಮೂಲಕ ಭವಿಷ್ಯದ ಬೇಡಿಕೆಗೆ ಅಗತ್ಯ ವಿದ್ಯುತ್ ಉತ್ಪಾದನೆಯತ್ತ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. 2016ರಲ್ಲಿ ಈ ಸ್ಥಾವರ ಸ್ಥಾಪನೆಗೆ ಮುಖ್ಯಮಂತ್ರಿಯಾಗಿ ನಾನೇ ಅಡಿಗಲ್ಲು ಹಾಕಿದ್ದೆ. ಆಗ ಡಿ.ಕೆ.ಶಿವಕುಮಾರ್ ಇಂಧನ ಸಚಿವರಾಗಿದ್ದರು. ಕೆ.ಜೆ.ಜಾರ್ಜ್ ಬೆಂಗಳೂರು ಅಭಿವೃದ್ಧಿ ಸಚಿವರಾಗಿದ್ದರು. ಇದೀಗ ಎಂಟು ವರ್ಷಗಳ ಬಳಿಕ ಮುಖ್ಯಮಂತ್ರಿಯಾಗಿ ಸ್ಥಾವರ ಲೋಕಾರ್ಪಣೆ ಮಾಡಿದ್ದೇನೆ ಎಂದು ಹೇಳಿದರು.

ವಿದ್ಯುತ್‌ನಲ್ಲಿ ಸ್ವಾವಲಂಬನೆ ಸಾಧ್ಯವಾಗದಿದ್ದರೆ ಆರ್ಥಿಕ ಪ್ರಗತಿ ಸಾಧ್ಯವಿಲ್ಲ. ವಾಣಿಜ್ಯ, ಕೃಷಿ, ಗೃಹ ಬಳಕೆಗೆ ವಿದ್ಯುತ್ ಅನಿವಾರ್ಯವಾಗಿದೆ. ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸದಿದ್ದಲ್ಲಿ ಜಿಡಿಪಿ ಬೆಳವಣಿಗೆಯೂ ಆಗುವುದಿಲ್ಲ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಗುಣಮಟ್ಟದ ವಿದ್ಯುತ್ ಪೂರೈಕೆ ಜೊತೆಗೆ ವಿದ್ಯುತ್ ಉತ್ಪಾದನೆ ಹೆಚ್ಚಿಸಲು ಆದ್ಯತೆ ನೀಡುತ್ತದೆ ಎಂದರು.

ರಾಜ್ಯದಲ್ಲಿ ಬೇಸಿಗೆಯಲ್ಲಿ 16 ರಿಂದ 17 ಸಾವಿರ ಮೆಗಾವ್ಯಾಟ್ ಮತ್ತು ಮಳೆಗಾಲದಲ್ಲಿ 15 ರಿಂದ 16 ಸಾವಿರ ಮೆಗಾವ್ಯಾಟ್ ಯೂನಿಟ್ ವಿದ್ಯುತ್ ಬೇಡಿಕೆ ಇದೆ. ಕಳೆದ ವರ್ಷ ತೀವ್ರ ಬರಗಾಲವಿದ್ದರೂ ಸಮರ್ಪಕ ವಿದ್ಯುತ್ ಪೂರೈಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಆದರೂ ಭವಿಷ್ಯದ ಬೇಡಿಕೆಯನ್ನು ಮುಂದಿಟ್ಟುಕೊಂಡು 2030ರ ವೇಳೆಗೆ ಈಗಿರುವ 34,639 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಸ್ಥಾಪಿತ ಸಾಮರ್ಥ್ಯವನ್ನು 60 ಸಾವಿರ ಮೆಗಾವ್ಯಾಟ್‌ಗೆ ಹೆಚ್ಚಿಸಲು ಬಜೆಟ್‌ನಲ್ಲಿ ಘೋಷಿಸಿದ್ದು, ಅದಕ್ಕೆ ತಕ್ಕಂತೆ ಯೋಜನೆ ರೂಪಿಸಲಾಗುತ್ತದೆ ಎಂದು ತಿಳಿಸಿದರು.

ಛತ್ತೀಸ್‌ಗಡದ ಗೋದ್ನಾದಲ್ಲಿ 1600 ಮೆಗಾವ್ಯಾಟ್ ಸಾಮರ್ಥ್ಯದ ಉಷ್ಣ ವಿದ್ಯುತ್ ಸ್ಥಾವರ, ಶರಾವತಿಯಲ್ಲಿ 2,000 ಮೆಗಾವ್ಯಾಟ್, ವಾರಾಹಿಯಲ್ಲಿ 1500 ಮೆಗಾವ್ಯಾಟ್ ಪಂಪ್ಡ್ ಸ್ಟೋರೇಜ್ ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದರ ಜೊತೆಗೆ ಸೌರ ಮತ್ತು ಪವನ ವಿದ್ಯುತ್ ಉತ್ಪಾದನೆಗೂ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಯಲಹಂಕ ಯೋಜನಾ ಪ್ರದೇಶದಲ್ಲಿ ನಿರ್ಮಾಣವಾಗಿರುವ ರಾಜ್ಯದ ಪ್ರಥಮ ನೈಸರ್ಗಿಕ ಅನಿಲ ಆಧಾರಿತ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು ಇಂದು ನಾನು ಮತ್ತು ಮುಖ್ಯಮಂತ್ರಿಗಳು ಲೋಕಾರ್ಪಣೆಗೊಳಿಸಿದೆವು.

ಈ ವೇಳೆ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದೆ.
ರಾಜ್ಯದಲ್ಲಿ ವಿದ್ಯುತ್​​ ಕೊರತೆ ನೀಗಿಸಲು ನಮ್ಮ ಸರ್ಕಾರ ದಿಟ್ಟ ಕ್ರಮ ಕೈಗೊಂಡಿರುವುದರ… pic.twitter.com/qRwEbiUbRL
— DK Shivakumar (@DKShivakumar) September 24, 2024

Ad
Ad
Nk Channel Final 21 09 2023