News Karnataka Kannada
Wednesday, May 01 2024
ಬೆಂಗಳೂರು

ಒಕ್ಕಲಿಗ, ಲಿಂಗಾಯತರಿಗೆ ಮೀಸಲಾತಿ ಹೆಚ್ಚಳ, ಮುಸ್ಲಿಮರ ಶೇ 4ರ ಮೀಸಲಾತಿ ವಾಪಸ್

Increase in reservation for Okkaliga, Lingayats, 4% reservation for Muslims is back
Photo Credit : News Kannada

ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳಲಾಗಿದ್ದು, ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ ಹೆಚ್ಚಿಸಲಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ಸಂಜೆ ನಡೆದ ಈ ಸಭೆಯನ್ನು ಪ್ರಸಕ್ತ ವಿಧಾನಸಭೆ ಅವಧಿಯ ಬಹುತೇಕ ಕೊನೆಯ ಸಚಿವ ಸಂಪುಟ ಸಭೆ ಎಂದೇ ಪರಿಗಣಿಸಲಾಗಿದೆ.

ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಸ್ವಾತಂತ್ರ್ಯ ಬಂದ ನಂತರ ಪ್ರಮುಖ ನಿರ್ಣಯ ಕೈಗೊಳ್ಳಲಾಗಿದೆ. ಕಾಲಕಾಲಕ್ಕೆ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಹಲವು ಸಮಿತಿಗಳನ್ನು ರಚಿಸಲಾಗಿದೆ, ಆದರೆ, ನಂತರ ಅವುಗಳ ಶಿಫಾರಸನ್ನು ಜಾರಿಮಾಡಿರಲಿಲ್ಲ. ಹಲವಾರು ವರದಿಗಳ ಜಾರಿಗೆ ಸರ್ಕಾರಗಳು ಮುಂದಾಗಿರಲಿಲ್ಲ. ಆದರೆ ನಾವು ಎಸ್​ಸಿ ಎಸ್​ಟಿ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು.

ಮುಸ್ಲಿಮರ ಶೇ 4ರ ಮೀಸಲಾತಿ ವಾಪಸ್: 2ಸಿ, 2ಡಿ ಹೊಸ ಪ್ರವರ್ಗ ಸೃಷ್ಟಿಗೆ ಮುಂದಾಗಿರುವ ರಾಜ್ಯ ಸರ್ಕಾರ ಅದಕ್ಕಾಗಿ ಮುಸ್ಲಿಂ ಸಮುದಾಯದ ಶೇ 4ರ ಮೀಸಲಾತಿ ವಾಪಸು ಪಡೆದಿದೆ. ಇದಕ್ಕೆ ಪ್ರತಿಯಾಗಿ ಮುಸ್ಲಿಂ ಸಮುದಾಯವನ್ನು ಆರ್ಥಿಕವಾಗಿ ಹಿಂದುಳಿದ ವರ್ಗದ ಅಡಿ ಪರಿಗಣಿಸಲು ನಿರ್ಧರಿಸಿದೆ. ಬಳಿಕ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಕ್ಕೆ ತಲಾ ಶೇ 2ರ ಮೀಸಲಾತಿ ನೀಡುವ ಬಗ್ಗೆ ತೀರ್ಮಾನ ಕೈಗೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು