ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತದ ಅಥ್ಲೀಟ್ಗಳು 6 ಪದಕಗಳನ್ನು ಗೆದ್ದಿದ್ದಾರೆ. ಟೋಕಿಯೊದಲ್ಲಿ ನಡೆದ ಹಿಂದಿನ ಒಲಿಂಪಿಕ್ಸ್ನಲ್ಲಿ ಭಾರತೀಯ ತಂಡವು 5 ಕಂಚಿನ ಪದಕಗಳು ಮತ್ತು ಒಂದು ಬೆಳ್ಳಿಯೊಂದಿಗೆ ಮರಳಿದೆ. ಈ ಬಾರಿ ಟೋಕಿಯೊದಲ್ಲಿ ನಡೆದ ಹಿಂದಿನ ಒಲಿಂಪಿಕ್ಸ್ನಲ್ಲಿ ಬಂದ ಅವರ ಅತ್ಯುತ್ತಮ ಪದಕಗಳ ಸಂಖ್ಯೆಗಿಂತ ಸ್ವಲ್ಪ ಕಡಿಮೆಯಾಗಿದೆ.
ಈ ಬಾರಿಯ ಒಲಿಂಪಿಕ್ಸ್ನಲ್ಲಿ ಭಾರತದ 117 ಕ್ರೀಡಾಪಟುಗಳು ಭಾಗವಹಿಸಿದ್ದರು. ಇವರಲ್ಲಿ ಪದಕಗಳನ್ನು ಗೆದ್ದಿರುವುದು ಕೇವಲ ಐವರು ಮಾತ್ರ ಎಂಬುದು ಇಲ್ಲಿ ಉಲ್ಲೇಖಾರ್ಹ. ಅಂದರೆ ಮನು ಭಾಕರ್ ಎರಡು ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದರಿಂದಾಗಿ ಕೊಂಚ ನಿರಾಸೆಯುಂಟುಮಾಡಿದೆ.
ದೇಶದ ಕ್ರೀಡಾಪಟುಗಳು ಸ್ಥಿತಿಸ್ಥಾಪಕತ್ವ ಮತ್ತು ದೃಢನಿಶ್ಚಯವನ್ನು ತೋರಿಸಿದ್ದಾರೆ, ಆದರೆ ಒಟ್ಟಾರೆ ಪದಕಗಳ ಸಂಖ್ಯೆಯು ಟೋಕಿಯೊ 2020 ಒಲಿಂಪಿಕ್ಸ್ ನಿಗದಿಪಡಿಸಿದ ನಿರೀಕ್ಷೆಗಳಿಗೆ ಅನುಗುಣವಾಗಿಲ್ಲ. ಅದರಂತೆ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತೀಯರು ಗೆದ್ದ ಪದಕಗಳ ಪಟ್ಟಿ ಈ ಕೆಳಗಿನಂತಿದೆ.
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಮೊದಲ ಪದಕ ಗೆದ್ದುಕೊಟ್ಟಿದ್ದು ಯಂಗ್ ಶೂಟರ್ ಮನು ಭಾಕರ್. ಮಹಿಳಾ 10 ಮೀಟರ್ ಏರ್ ಪಿಸ್ತೂಲ್ ಶೂಟಿಂಗ್ನಲ್ಲಿ ಕಂಚಿನ ಪದಕಕ್ಕೆ ಕೊರೊಳೊಡ್ಡುವ ಮೂಲಕ ಮನು ಭಾರತದ ಪದಕದ ಖಾತೆ ತೆರೆದಿದ್ದರು.
3ನೇ ಸ್ಥಾನಕ್ಕಾಗಿ ನಡೆದ ಪಂದ್ಯದಲ್ಲಿ ಸ್ಪೇನ್ ತಂಡವನ್ನು 2-1 ಅಂತರದಿಂದ ಮಣಿಸುವ ಮೂಲಕ ಭಾರತೀಯ ಹಾಕಿ ತಂಡ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು.ಟೋಕಿಯೋ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದಿದ್ದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಈ ಬಾರಿ 2ನೇ ಸ್ಥಾನ ಪಡೆಯುವ ಮೂಲಕ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡರು.