Bengaluru 22°C
Ad

ಮುಂಬೈ-ಹುಬ್ಬಳ್ಳಿ ನಡುವೆ ಇಂಡಿಗೋ ವಿಮಾನಯಾನ ಜು.15ರಿಂದ ಪುನರಾರಂಭ

ಮುಂಬೈ- ಹುಬ್ಬಳ್ಳಿ- ಮುಂಬೈ ಮಧ್ಯೆ ಇಂಡಿಗೋ 6e ವಿಮಾನಯಾನ ಸೇವೆ ಜುಲೈ 15ರಿಂದ ಪುನರಾರಂಭಗೊಳ್ಳಲಿದೆ. ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ಅವರ ಮನವಿ ಮೇರೆಗೆ ಇಂಡಿಗೋ 6 ಇ ವಿಮಾನ ಸಂಚಾರವನ್ನು ಮತ್ತೆ ಶುರು ಮಾಡಲು ನಾಗರಿಕ ವಿಮಾನಯಾನ ಸಚಿವಾಲಯ ನಿರ್ಧರಿಸಿದೆ.

ಹುಬ್ಬಳ್ಳಿ: ಮುಂಬೈ- ಹುಬ್ಬಳ್ಳಿ- ಮುಂಬೈ ಮಧ್ಯೆ ಇಂಡಿಗೋ 6e ವಿಮಾನಯಾನ ಸೇವೆ ಜುಲೈ 15ರಿಂದ ಪುನರಾರಂಭಗೊಳ್ಳಲಿದೆ. ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಶಿ ಅವರ ಮನವಿ ಮೇರೆಗೆ ಇಂಡಿಗೋ 6 ಇ ವಿಮಾನ ಸಂಚಾರವನ್ನು ಮತ್ತೆ ಶುರು ಮಾಡಲು ನಾಗರಿಕ ವಿಮಾನಯಾನ ಸಚಿವಾಲಯ ನಿರ್ಧರಿಸಿದೆ.

Ad
300x250 2

IndiGo6E ನ ನಿರ್ವಹಣೆಗೆ ಸಚಿವ ಪ್ರಲ್ಹಾದ್‌ ಜೋಶಿ ಅವರು ಈ ಹಿಂದೆ ನಾಗರಿಕ ವಿಮಾನಯಾನ ಸಚಿವಾಲಯದ ಗಮನ ಸೆಳೆದಿದ್ದರು. ಈ ಹಿನ್ನೆಲೆಯಲ್ಲಿ ಸಚಿವಾಲಯ ಇದೀಗ ವಿಮಾನ ಸಂಚಾರ ಪುನರಾರಂಭಕ್ಕೆ ಕ್ರಮ ಕೈಗೊಂಡಿದೆ.

ಮುಂಬೈ-ಹುಬ್ಬಳ್ಳಿ-ಮುಂಬೈ ನಡುವೆ ಬರುವ ಜುಲೈ 15ರಿಂದ ದೈನಂದಿನ ವಿಮಾನಗಳು ನಿರಂತರವಾಗಿ ಕಾರ್ಯ ನಿರ್ವಹಿಸಲಿವೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಟ್ವಿಟರ್ ಮೂಲಕ ಈ ಅಗತ್ಯ ಮಾಹಿತಿ ಹಂಚಿಕೊಂಡಿದ್ದಾರೆ.

Ad
Ad
Nk Channel Final 21 09 2023
Ad