News Karnataka Kannada
Monday, April 29 2024
ಕರ್ನಾಟಕ

ಜುಲೈ 27ರವರೆಗೂ ಮಳೆ: ಹಲವೆಡೆ ಜನಜೀವನ ಅಸ್ತವ್ಯಸ್ತ, ಪರೀಕ್ಷೆಗಳು ಮುಂದೂಡಿಕೆ

heavy rain
Photo Credit : News Kannada

ಕರ್ನಾಟಕದಲ್ಲಿ ಮಳೆ ಅಬ್ಬರ ಜೋರಾಗಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಎಗ್ಗಿಲ್ಲದೇ ಸುರಿಯುತ್ತಿರುವುದರಿಂದ ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಬಿಟ್ಟು ಬಿಡದೇ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆಯ ಅಬ್ಬರಕ್ಕೆ ಹಲವೆಡೆ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿವೆ.

ಮಳೆ ಇನ್ನೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಸುಳ್ಯ, ಉಡುಪಿ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜು, ಅಂಗನವಾಡಿಗಳಿಗೆ ಇಂದು(ಜುಲೈ 255) ರಜೆ ಘೋಷಿಸಲಾಗಿದೆ. ರಾಜ್ಯದ ಕರಾವಳಿ ಭಾಗದ 3 ಜಿಲ್ಲೆಗಳಲ್ಲಿ ರೆಡ್​ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್​ ಘೋಷಣೆ ಮಾಡಿದೆ.

ರಾಜ್ಯದಲ್ಲಿ ಜುಲೈ 27ರವರೆಗೂ ಮಳೆಯ ಆರ್ಭಟ ಮುಂದುವರಿಯಲಿದೆ. ಸಮುದ್ರಮಟ್ಟದಿಂದ 3.5ರಿಂದ 5.8 ಕಿ.ಮೀ.ವರೆಗೆ ಗಾಳಿ ಬೀಸುತ್ತಿದೆ. ಕಳೆದ ನಾಲ್ಕೈದು ದಿನಗಳಿಂದ ರಾಜ್ಯದಲ್ಲಿ ವೇಗವಾಗಿ ಗಾಳಿ ಬೀಸುತ್ತಿರುವುದರಿಂದ ಜುಲೈ 27ರವರೆಗೆ ಮಳೆ ಆರ್ಭಟ ಹೀಗೆ ಮುಂದುವರಿಯಲಿದೆ. ಬೆಂಗಳೂರು ನಗರದಲ್ಲಿ ತುಂತುರು ಮಳೆ ಸಹಿತ ಚಳಿ ವಾತಾವರಣವಿರಲಿದೆ; ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಲೊದೆ. ಬೆಂಗಳೂರು ನಗರ & ಗ್ರಾಮಾಂತರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು