News Karnataka Kannada
Wednesday, April 17 2024
Cricket
ಕರ್ನಾಟಕ

ಕರ್ನಾಟಕ ಹೈಕೋರ್ಟ್​ಗೆ ನೂತನ ಸಿಜೆ ನೇಮಕಕ್ಕೆ ರಾಷ್ಟ್ರಪತಿ ಅಂಕಿತ

ಕರ್ನಾಟಕ ಹೈಕೋರ್ಟ್​ಗೆ ನೂತನ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆ) ನಿಲಯ್ ವಿಪಿನ್​ಚಂದ್ರ ಅಂಜಾರಿಯಾ ಅವರ ನೇಮಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ. ಹಾಲಿ ಮುಖ್ಯ ನ್ಯಾಯಾಮೂರ್ತಿ ಪಿ.ಎಸ್.
Photo Credit : News Kannada

ಬೆಂಗಳೂರು: ಕರ್ನಾಟಕ ಹೈಕೋರ್ಟ್​ಗೆ ನೂತನ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆ) ನಿಲಯ್ ವಿಪಿನ್​ಚಂದ್ರ ಅಂಜಾರಿಯಾ ಅವರ ನೇಮಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ.

ಹಾಲಿ ಮುಖ್ಯ ನ್ಯಾಯಾಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರು ಇದೇ ಫೆಬ್ರವರಿ 24ರಂದು ನಿವೃತ್ತಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಕೊಲಿಜಿಯಂ, ನಿಲಯ್ ವಿಪಿನ್​ಚಂದ್ರ ಅಂಜಾರಿಯಾ ಅವರ ಹೆಸರನ್ನು ಶಿಫಾರಸು ಮಾಡಿತ್ತು. ಇದೀಗ ರಾಷ್ಟ್ರಪತಿ ಅಂಕಿತ ಬಿದ್ದಿದ್ದು, ದಿನೇಶ್ ಕುಮಾರ್ ನಿವೃತ್ತಿ‌ ನಂತರ ಅಂಜಾರಿಯಾ ಅವರು ಕರ್ನಾಟಕ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ಇನ್ನು ಕರ್ನಾಟಕ ಹೈಕೋರ್ಟ್​ನ ನೂತನ ಸಿಜೆ ಅಂಜಾರಿಯಾ ಅವರು 2011ರಿಂದ ಗುಜರಾತ್​ ಹೈಕೋರ್ಟ್​​ನಲ್ಲಿ ನ್ಯಾಯಮೂರ್ತಿಯಾಗಿಯಾಗಿದ್ದರು. ಹೈಕೋರ್ಟ್​ ನ್ಯಾಯಧೀಶರಾಗಿ ಬಡ್ತಿ ಪಡೆಯುವ ಮೊದಲು ಅವರು ಗುಜರಾತ್​ ಹೈಕೋರ್ಟ್​​ನಲ್ಲಿ ಸಿವಿಲ್, ಸಾಂವಿಧಾನಿಕ, ಕಂಪನಿ ಕಾನೂನು, ಕಾರ್ಮಿಕ ಮತ್ತು ಸೇವಾ ವಿಷಯಗಳ ವಕೀಲಿಕೆ ಮಾಡಿದ್ದಾರೆ. ಅಲ್ಲದೇ ಸಿವಿಲ್​​ ಮತ್ತು ಸಾಂವಿಧಾನಿಕ ಪ್ರಕರಣಗಳಲ್ಲಿ ಅವರು ಪರಿಣತಿ ಹೊಂದಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು