Bengaluru 27°C
Ad

ಹಣ ಡಬಲ್ ಮಾಡಿಕೊಡುವುದಾಗಿ ನಂಬಿಸಿ 30 ಕೋಟಿ ರೂ. ವಂಚನೆ: ದಂಪತಿ ಪರಾರಿ

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹಣ ಡಬಲ್ ಮಾಡಿಕೊಡುವುದಾಗಿ ನಂಬಿಸಿ ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿ, ದಂಪತಿ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ.

ಕಲಬುರಗಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹಣ ಡಬಲ್ ಮಾಡಿಕೊಡುವುದಾಗಿ ನಂಬಿಸಿ ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿ, ದಂಪತಿ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ.

ಕ್ಯಾಪಿಟಲ್‌ ಗ್ರೋ ಲರ್ನ್ ಟ್ರೇಡಿಂಗ್ ಕಂಪನಿಯ ಮಾಲೀಕ ಉತ್ಕರ್ಷ ವರ್ಧಮಾನೆ ಮತ್ತು ಪತ್ನಿ ಸಾವಿತ್ರಿ ವರ್ಧಮಾನೆ ವಿರುದ್ಧ ಕೋಟ್ಯಂತರ ರೂಪಾಯಿ ವಂಚ ಆರೋಪ ಕೇಳಿಬಂದಿದ್ದು, ವಂಚನೆ ಬಗ್ಗೆ ದೂರು ದಾಖಲಾಗುತ್ತಿದ್ದಂತೆ ಕಿಲಾಡಿ ದಂಪತಿ ಪರಾರಿಯಾಗಿದ್ದಾರೆ.

ಕಲಬುರಗಿ ತಾಲೂಕಿನ ಕುರಿಕೋಟಾ ಗ್ರಾಮದ ಶಿಕ್ಷಕ ವೀರೇಶ ಭೀಮಾಶಂಕರ ಭಾಗೋಡಿ (24) ಎಂಬುವವರು ನೀಡಿದ ದೂರಿನ ಮೇರೆಗೆ ನಗರದ ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉತ್ಕರ್ಷ ವರ್ಧಮಾನೆ ಮತ್ತು ಪತ್ನಿ ಸಾವಿತ್ರಿ ವರ್ಧಮಾನೆ ಅವರು ನಗರದ ಗಾಂಧಿ ನಗರದ ಬಿ.ಎಲ್.ಕಾಂಪ್ಲೆಕ್ಸ್‌ನಲ್ಲಿ ಒಂದು ಆಫೀಸ್ ಮಾಡಿಕೊಂಡು 1 ಲಕ್ಷ ತುಂಬಿದರೆ ಒಂದು ವರ್ಷದಲ್ಲಿ 2 ಲಕ್ಷ ಕೊಡುತ್ತೇವೆ ಎಂದು ಹೇಳಿದ್ದರು.

ಇದನ್ನು ನಂಬಿ ಹಂತ ಹಂತವಾಗಿ ವೀರೇಶ ಭೀಮಾಶಂಕರ ಭಾಗೋಡಿ ಅವರು 5.5 ಲಕ್ಷ ರೂ. ನೀಡಿದ್ದರು. ಇವರಂತೆ ಮಹ್ಮದ್ ಇಬ್ರಾಹಿಂ, ಗುಂಡಪ್ಪ ವಾರದ, ಚಂದ್ರಕಾಂತ ರಾಠೋಡ್, ಸುನಿತಾ, ಶರಣು ಎಂಬುವವರು ಸೇರಿ ಇತರರು ಸುಮಾರು 30 ಕೋಟಿಗೂ ಹೆಚ್ಚು ಹಣವನ್ನು ಉತ್ಕರ್ಷ ವರ್ಧಮಾನೆ ಅವರಿಗೆ ನೀಡಿದ್ದಾರೆ.

ಈ ಹಣವನ್ನು ಉತ್ಕರ್ಷ ವರ್ಧಮಾನೆ ಮತ್ತು ಅವರ ಪತ್ನಿ ಸಾವಿತ್ರಿ ವರ್ಧಮಾನೆ ತೆಗೆದುಕೊಂಡು ಪರಾರಿಯಾಗಿದ್ದಾರೆ ಎಂದು ಸಂತ್ರಸ್ತರು ದೂರಿನಲ್ಲಿ ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ವರ್ಧಮಾನೆ ದಂಪತಿಗೆ ಪರಾರಿಯಾಗಲು ಸಹಕರಿಸಿದ ಸಂಬಂಧಿಕರಾದ ಸುಧಾ ಠಾಕೂರ್ ಮತ್ತು ವಿಜಯಸಿಂಗ್ ಹಜಾರೆ ಅವರ ವಿರುದ್ಧವೂ ಪ್ರಕರಣ ದಾಖಲಾಗಿದೆ.

Ad
Ad
Nk Channel Final 21 09 2023
Ad