Bengaluru 21°C
Ad

ಕಲಬುರಗಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಭೀಕರ ಹತ್ಯೆ!

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಹತ್ಯೆಗೈದ ಘಟನೆ ಕಲಬುರಗಿ ನಗರದ ಹೊರವಲಯದ ಕೆಸರಟಗಿಯಲ್ಲಿ ನಡೆದಿದೆ.

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಹತ್ಯೆಗೈದ ಘಟನೆ ಕಲಬುರಗಿ ನಗರದ ಹೊರವಲಯದ ಕೆಸರಟಗಿಯಲ್ಲಿ ನಡೆದಿದೆ.

ಕಪಿಲ್ ಗಾಯಕ್ವಾಡ್ (38) ಕೊಲೆಯಾದ ವ್ಯಕ್ತಿ. ದುಷ್ಕರ್ಮಿಗಳು ಪತ್ನಿಯ ಸಮ್ಮುಖದಲ್ಲೆ ಕಪಿಲ್‍ನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆಗೈದಿದ್ದಾರೆ. ಸೆಂಟ್ರಿಂಗ್ ಕೆಲಸ ಮುಗಿಸಿಕೊಂಡು ಕೆಸರಟಗಿ ಬಳಿಯ ರೈಲ್ವೆ ಅಂಡರ್ ಬ್ರೀಡ್ಜ್ ಬಳಿ ತೆರಳುತ್ತಿರುವಾಗ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ಪರಿಣಾಮ ಕಪಿಲ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹತ್ಯೆಗೀಡಾದ ಕಪೀಲ್ ಕುಟುಂಬಸ್ಥರು ಆತನ ಪತ್ನಿಯ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Ad
Ad
Nk Channel Final 21 09 2023