Bengaluru 24°C
Ad

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಟೆಂಪೋ: ಓರ್ವ ಮೃತ್ಯು

ಗೂಡ್ಸ್ ಮಿನಿ ಟೆಂಪೋ ಪಲ್ಟಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಡೊಂಗರಗಾಂವ್ ಕ್ರಾಸ್ ಬಳಿ ನಡೆದಿದೆ.

ಕಲಬುರಗಿ: ಗೂಡ್ಸ್ ಮಿನಿ ಟೆಂಪೋ ಪಲ್ಟಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಡೊಂಗರಗಾಂವ್ ಕ್ರಾಸ್ ಬಳಿ ನಡೆದಿದೆ.

ಹರಕಂಚಿ ಗ್ರಾಮದ ಕೂಲಿ ಕಾರ್ಮಿಕ ಶಿವಪ್ಪ ಸಾವನ್ನಪ್ಪಿದ ದುರ್ದೈವಿ. ಟೆಂಪೋ ಪಲ್ಟಿ ಹೊಡೆದ ಪರಿಣಾಮ ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಟೆಂಪೋದಲ್ಲಿ ಹರಕಂಚಿ ಗ್ರಾಮದಿಂದ ಕೂಲಿ ಕೆಲಸಕ್ಕೆಂದು ಹುಮನಬಾದ್ ಪಟ್ಟಣಕ್ಕೆ ತೆರಳುತ್ತಿದ್ದರು. ವಾಹನವೊಂದನ್ನು ಓವರ್‌ಟೆಕ್ ಮಾಡಲು ಹೋಗಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಟೆಂಪೋ ಪಲ್ಟಿ ಹೊಡೆದಿದೆ. ಸ್ಥಳಕ್ಕೆ ಕಮಲಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Ad
Ad
Nk Channel Final 21 09 2023
Ad