ಕಲಬುರಗಿ: ಮೆಡಿಕಲ್ ಸೀಟು ಸಿಗಲಿಲ್ಲ ಎಂಬ ಕಾರಣಕ್ಕೆ ಮನನೊಂದು ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಅಫಜಲಪೂರ ತಾಲೂಕಿನ ದುದ್ದಣಗಿ ಗ್ರಾಮದಲ್ಲಿ ನಡೆದಿದೆ.

ದುದ್ದಣಗಿ ಗ್ರಾಮದ ಶ್ವೇತಾ ಅಪ್ಪಾಸಾಬ ಗುಣಾರಿ (20) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ಗುರುತುಸಲಾಗಿದೆ. ನೀಟ್ ಪರೀಕ್ಷೆ ಬರೆದರು ಸಹ ಮೇಡಿಕಲ್‌ ಸೀಟ್ ಸಿಗಲಿಲ್ಲ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ. ಯುವತಿ ಆತ್ಮಹತ್ಯೆ ಪ್ರಕರಣ ಅಫಜಲಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.