ಕಲಬುರಗಿ: ತೀವ್ರ ಬಿಸಿಲಿನ ನಡುವೆಯೂ ಕರ್ತವ್ಯ ನಿರ್ವಹಿಸುತ್ತಿರುವ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯ ಕಷ್ಟವನ್ನು ಮನಗಂಡ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರು ವಿಶೇಷ ಕ್ರಮ ಕೈಗೊಂಡಿದ್ದಾರೆ. ಸಿಬ್ಬಂದಿಗೆ ಬಿಸಿಲಿನ ತಾಪದಿಂದ ರಕ್ಷಣೆ ಸಿಗುವಂತೆ ಎಸಿ ಹೆಲ್ಮೆಟ್‌ಗಳನ್ನು ಒದಗಿಸುವ ಮೂಲಕ ಮಾನವೀಯತೆ ತೋರಿಸಿದ್ದಾರೆ.
ನಗರದಾದ್ಯಂತ ಸುಗಮ ಹಾಗೂ ಪರಿಣಾಮಕಾರಿ ಟ್ರಾಫಿಕ್ ನಿಯಂತ್ರಣಕ್ಕಾಗಿ ದಿನವಿಡೀ ರಸ್ತೆಯ ಮೇಲೆ ನಿಂತು ಕೆಲಸ ಮಾಡುವ ಸಿಬ್ಬಂದಿಗೆ ಇದು ದೊಡ್ಡ ನೆರವಾಗಲಿದೆ. ಬಿಸಿಲಿನ ತಾಪವನ್ನು ಕಡಿಮೆ ಮಾಡುತ್ತಾ, ಅವರ ಕಾರ್ಯಕ್ಷಮತೆಯನ್ನೂ ಹೆಚ್ಚಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

