ಕಲಬುರಗಿ: ಜಾತಿ ನಿಂದನೆ ಆರೋಪದಲ್ಲಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕುಲಪತಿ ಹಾಗೂ ಕುಲಸಚಿವರ ವಿರುದ್ಧ ಪ್ರಕರಣ ದಾಖಲಾಗಿದೆ.
ಕನ್ನಡ ವಿಭಾಗದ ಸಂಶೋಧನಾ ವಿದ್ಯಾರ್ಥಿ ನಂದಪ್ಪ ನೀಡಿದ ದೂರಿನ ಮೇರೆಗೆ ನರೋಣಾ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಆ.1 ರಂದು ಸಿಯುಕೆಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದ ವೇಳೆ ಸಂಶೋಧನಾ ವಿದ್ಯಾರ್ಥಿ ನಂದಪ್ಪ ಅವರನ್ನು ವಿವಿ ಕ್ಯಾಂಪಸ್ ಒಳಗೆ ಸಿಬ್ಬಂದಿ ಬಿಟ್ಟಿಲ್ಲ.
ಎಸ್‌ಸಿ ಎಂಬ ಕಾರಣಕ್ಕೆ ನನ್ನನ್ನು ಒಳಗೆ ಬಿಡಬೇಡಿ ಎಂದು ಕುಲಪತಿ ಬಟ್ಟೂ ಸತ್ಯನಾರಾಯಣ ಹಾಗೂ ಕುಲಸಚಿವ ಆರ್.ಆರ್. ಬಿರಾದಾರ್ ಹೇಳಿದ್ದಾರೆ. ಹೀಗಾಗಿ ಇಬ್ಬರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.
Ad