Ad

ಸಿ ಎಂ ಬದಲಾವಣೆ ಮಾಡಿದರೆ ಲಿಂಗಾಯತರಿಗೆ ಆ ಸ್ಥಾನ ನೀಡಿ- ರಂಭಾಪುರಿ ಶ್ರೀಗಳು

: ಕಾಂಗ್ರೆಸ್​ ನಲ್ಲಿ ಸಿಎಂ ಬದಲಾವಣೆ ಹಾಗೂ ಹೆಚ್ಚುವರಿ ಡಿಸಿಎಂ ಬಗ್ಗೆ ಚರ್ಚೆ ವಿಚಾರ ಇದೀಗ ರಂಭಾಪುರಿ ಪೀಠದ ಜಗದ್ಗುರುಗಳು ಈ ಕುರಿತು ಪ್ರತಿಕ್ರಿಯಿಸಿದ್ದು, 'ಒಕ್ಕಲಿಗ ಸಮುದಾಯದ ಚಂದ್ರಶೇಖರಶ್ರೀ ಸಿಎಂ ಸಮ್ಮುಖದಲ್ಲೇ ಬದಲಾವಣೆ ಬಗ್ಗೆ ಮಾತನಾಡಿದ್ದು ವಿಪರ್ಯಾಸ ಎಂದಿದ್ದಾರೆ.

ಕಲಬುರಗಿ:  ಕಾಂಗ್ರೆಸ್​ ನಲ್ಲಿ ಸಿಎಂ ಬದಲಾವಣೆ ಹಾಗೂ ಹೆಚ್ಚುವರಿ ಡಿಸಿಎಂ ಬಗ್ಗೆ ಚರ್ಚೆ ವಿಚಾರ ಇದೀಗ ರಂಭಾಪುರಿ ಪೀಠದ ಜಗದ್ಗುರುಗಳು ಈ ಕುರಿತು ಪ್ರತಿಕ್ರಿಯಿಸಿದ್ದು, ‘ಒಕ್ಕಲಿಗ ಸಮುದಾಯದ ಚಂದ್ರಶೇಖರಶ್ರೀ ಸಿಎಂ ಸಮ್ಮುಖದಲ್ಲೇ ಬದಲಾವಣೆ ಬಗ್ಗೆ ಮಾತನಾಡಿದ್ದು ವಿಪರ್ಯಾಸ ಎಂದಿದ್ದಾರೆ. ಕಲಬುರಗಿ ನಗರದಲ್ಲಿ ಮಾತನಾಡಿದ ಅವರು, ಬದಲಾವಣೆ ಸಮಯ ಬಂದ್ರೆ ‘ಕೈ’ ಹೈಕಮಾಂಡ್ ಉದಾಸೀನತೆ ತೋರದೇ ವೀರಶೈವ ಲಿಂಗಾಯತ ನಾಯಕರಿಗೆ ನೀಡಬೇಕು ಎಂದಿದ್ದಾರೆ.

Ad
300x250 2

ಸಿಎಂ ಸ್ಥಾನ ನೀಡಲು ಅಗದಿದ್ದರೇ ಉಪಮುಖ್ಯಮಂತ್ರಿ ಆದರೂ ಮಾಡಬೇಕು. ಕಾಂಗ್ರೆಸ್ ಹೈಕಮಾಂಡ್ ಇಂತಹ ಬೆಳವಣಿಗೆಗೆ ಕಡಿವಾಣ ಹಾಕಬೇಕು, ಇಲ್ಲದಿದ್ದರೇ ಸರ್ಕಾರದ ಆಡಳಿತದ ಮೇಲೆ ಪರಿಣಾಮ ಬೀರುತ್ತದೆ. ಸಿದ್ದರಾಮಯ್ಯ ಅವರು ಯೋಗ್ಯರಿದ್ದರೆ ಸಿಎಂ ಸ್ಥಾನದಲ್ಲಿ ಅವರನ್ನೇ ಮುಂದುವರಿಸಿ ಎಂದು ಹೇಳಿದರು.ಜೂ.27 ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ‘ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಅವರು, ‘ದಯವಿಟ್ಟು ಡಿಸಿಎಂ ಡಿಕೆ ಶಿವಕುಮಾರ್​ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ಸಿದ್ದರಾಮಯ್ಯನವರು ಮನಸ್ಸು ಮಾಡಿದರೆ ಮಾತ್ರ ಇದು ಸಾಧ್ಯ. ಹಾಗಾಗಿ ಸಿಎಂ ಸ್ಥಾನ ಡಿಕೆ ಶಿವಕುಮಾರ್​​ಗೆ ಅವರು ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದಿದ್ದರು. ಇದೀಗ ರಂಭಾಪುರಿ ಪೀಠದ ಜಗದ್ಗುರುಗಳು ಇದಕ್ಕೆ ಧ್ವನಿಗೂಡಿಸಿದ್ದಾರೆ.

Ad
Ad
Nk Channel Final 21 09 2023
Ad