Bengaluru 26°C
Ad

ಕಲಬುರಗಿ : ಆರೋಗ್ಯ ಇಲಾಖೆ ಸಿಬ್ಬಂದಿ ಆತ್ಮಹತ್ಯೆಗೆ ಶರಣು

ಸಮುದಾಯ ಆರೋಗ್ಯ ಕೇಂದ್ರದ ಡಿ ಗ್ರೂಪ್‌ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಂಚಾವರಂ ಗ್ರಾಮದಲ್ಲಿ ನಡೆದಿದೆ.

ಕಲಬುರಗಿ: ಸಮುದಾಯ ಆರೋಗ್ಯ ಕೇಂದ್ರದ ಡಿ ಗ್ರೂಪ್‌ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಂಚಾವರಂ ಗ್ರಾಮದಲ್ಲಿ ನಡೆದಿದೆ.

ಡಿ ಗ್ರೂಪ್ ಮಹಿಳಾ ಸಿಬ್ಬಂದಿ ಮಾಲಾಶ್ರೀ( 29) ಮೃತ ಪಟ್ಟ ಮಹಿಳೆ. ಮಾಲಾಶ್ರೀ ಕುಂಚಾವರಂನ ಸಮುದಾಯ ಆರೋಗ್ಯ ಕೇಂದ್ರದ ವಸತಿ ಗೃಹದಲ್ಲಿ ನೇಣಿಗೆ ಶರಣಾಗಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad
Ad
Nk Channel Final 21 09 2023
Ad