Ad

ಹೋಟೆಲ್ ನಲ್ಲಿ ಅಡುಗೆ ಸಿಲಿಂಡರ್‌ ಸ್ಫೋಟ: ನಾಲ್ವರ ಸ್ಥಿತಿ ಗಂಭೀರ, 11 ಮಂದಿಗೆ ಗಾಯ

ಇಲ್ಲಿನ ಸಪ್ತಗಿರಿ ಆರೆಂಜ್ ಹೋಟೆಲ್ ನಲ್ಲಿ ಅಡುಗೆ ಸಿಲಿಂಡರ್‌ ಸ್ಫೋಟಗೊಂಡಿರುವ ಘಟನೆ ನಡೆದಿದೆ. ಪ್ರಕರಣದಲ್ಲಿ 11 ಮಂದಿ ಕಾರ್ಮಿಕರು ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. 

ಕಲಬುರಗಿ: ಇಲ್ಲಿನ ಸಪ್ತಗಿರಿ ಆರೆಂಜ್ ಹೋಟೆಲ್ ನಲ್ಲಿ ಅಡುಗೆ ಸಿಲಿಂಡರ್‌ ಸ್ಫೋಟಗೊಂಡಿರುವ ಘಟನೆ ನಡೆದಿದೆ. ಪ್ರಕರಣದಲ್ಲಿ 11 ಮಂದಿ ಕಾರ್ಮಿಕರು ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

Ad
300x250 2

ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ‌ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿ, ಕಾರ್ಮಿಕರನ್ನು ರಕ್ಷಿಸುವ ಕೆಲಸ ಮಾಡಿದ್ದಾರೆ. ಘಟನೆಯಲ್ಲಿ ಕಾರ್ಮಿಕರಾದ ರಾಕೇಶ್, ಶಂಕರ್, ಗುರುಮೂರ್ತಿ, ಪ್ರಶಾಂತ್, ಸತ್ಯವಾನ ಶರ್ಮ್, ಅಪ್ಪಾರಾಯ, ಮಲ್ಲಿನಾಥ್, ವಿಠಲ್, ಮಹೇಶ್ ಲಕ್ಷ್ಮಣ ಸೇರಿ 10 ಜನ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Ad
Ad
Nk Channel Final 21 09 2023
Ad