Ad

ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ! ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಗೆ ದಲಿತ ಸೇನೆ ಆಗ್ರಹ

ಅತ್ಯಾಚಾರಕ್ಕೆ ಒಳಗಾದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಕಲಬುರಗಿ ನಗರದ ಸಬ್ ಅರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದು ವರದಿಯಾಗಿದೆ.ಮೃತ ಬಾಲಕಿಯನ್ನು ಕಲಬುರಗಿ ನಗರದ ನಿವಾಸಿ ಎಂದು ಗುರುತಿಸಲಾಗಿದೆ.

ಕಲಬುರಗಿ: ಅತ್ಯಾಚಾರಕ್ಕೆ ಒಳಗಾದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಕಲಬುರಗಿ ನಗರದ ಸಬ್ ಅರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದು ವರದಿಯಾಗಿದೆ.ಮೃತ ಬಾಲಕಿಯನ್ನು ಕಲಬುರಗಿ ನಗರದ ನಿವಾಸಿ ಎಂದು ಗುರುತಿಸಲಾಗಿದೆ. ಆರೋಪಿಯನ್ನು ನಗರದ ಬಲಂದ್ ಫರ್ವೆಝ್ ಕಾಲನಿಯ ಸರ್ಫರಾಜ್ (30) ಎಂದು ತಿಳಿದುಬಂದಿದೆ.ಈ ಕುರಿತು ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆಗೆ ಕ್ರಮವಹಿಸಿದ್ದಾರೆ.

Ad
300x250 2

ಮೃತ ಬಾಲಕಿಯ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ದಲಿತ ಸೇನೆಯ ಕಾರ್ಯಕರ್ತರು ನಗರದ ಕೆಬಿಎನ್ ಆಸ್ಪತ್ರೆ ಎದುರಿನ ಮುಖ್ಯ ರಸ್ತೆಯನ್ನು ತಡೆದು ಧರಣಿ ನಡೆಸಿದ್ದಾರೆ.

ಅತ್ಯಾಚಾರಕ್ಕೆ ಒಳಗಾದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ನೀಡಿದ ಹೈಡೋಸ್ ಔಷಧಿಯಿಂದ ಮೃತಪಟ್ಟಿದ್ದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ.

ಆರೋಪಿ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುವುದು ಎಂದು ನಗರ ಕಾನೂನು ಮತ್ತು ಸುವ್ಯವಸ್ಥೆ ಉಪ ಪೊಲೀಸ್ ಆಯುಕ್ತರಾದ ಕನೀಕಾ ಶಿಕ್ರೆವಾಲ್ ಮಾಹಿತಿ ನೀಡಿದ್ದಾರೆ.

Ad
Ad
Nk Channel Final 21 09 2023
Ad