Bengaluru 26°C
Ad

ಕುವೈತ್‌ನಲ್ಲಿ ಅಗ್ನಿ ಅವಘಡ : ಕಲಬುರಗಿ ಮೂಲದ ಕುಟುಂಬಕ್ಕೆ 5 ಲಕ್ಷ ಪರಿಹಾರ

ಕುವೈತ್‌ನಲ್ಲಿ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟ ಕಲಬುರಗಿಯ ವಿಜಯ್ ಕುಮಾರ್ ಪ್ರಸನ್ನ ಕುಟುಂಬಕ್ಕೆ ರಾಜ್ಯ ಸರ್ಕಾರ ಮಂಗಳವಾರ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಕಲಬುರಗಿ: ಕುವೈತ್‌ನಲ್ಲಿ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟ ಕಲಬುರಗಿಯ ವಿಜಯ್ ಕುಮಾರ್ ಪ್ರಸನ್ನ ಕುಟುಂಬಕ್ಕೆ ರಾಜ್ಯ ಸರ್ಕಾರ ಮಂಗಳವಾರ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಪ್ರಸನ್ನ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಸಾರಸಾಂಬಾ ಗ್ರಾಮದವರು ಎಂದು ತಿಳಿದು ಬಂದಿದೆ.ಅವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂ. ಪರಿಹಾರ ನೀಡಲಾಗಿದೆ. ಪ್ರಸನ್ನ ಅವರು ಕುವೈತ್‌ನಲ್ಲಿ ಎಂಟು ವರ್ಷಗಳಿಂದ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದರು.

ಪ್ರಸನ್ನ ಅವರು ಒಡಹುಟ್ಟಿದವರು ಸೇರಿದಂತೆ ಎಂಟು ಮಂದಿ ಅವಲಂಬಿತರನ್ನು ಹೊಂದಿದ್ದಾರೆ. ಕರ್ನಾಟಕ ಎನ್‌ಆರ್‌ಐ ಫೋರಂನ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರ ಮನವಿ ಆಧರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಹಾರಕ್ಕೆ ಅನುಮೋದನೆ ನೀಡಿದ್ದಾರೆ.

Ad
Ad
Nk Channel Final 21 09 2023
Ad