Ad

ಜೇವರ್ಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 17 ವಿದ್ಯಾರ್ಥಿನಿಯರಿಗೆ ಫುಡ್ ಪಾಯಿಸನ್​: ಆಸ್ಪತ್ರೆಗೆ ದಾಖಲು

ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 17 ವಿದ್ಯಾರ್ಥಿನಿಯರಿಗೆ ಫುಡ್ ಪಾಯಿಸನ್​ ನಿಂದಾಗಿ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. 

ಕಲಬುರಗಿ: ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 17 ವಿದ್ಯಾರ್ಥಿನಿಯರಿಗೆ ಫುಡ್ ಪಾಯಿಸನ್​ ನಿಂದಾಗಿ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.

Ad
300x250 2

ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಶನಿವಾರ ಬೆಳಗ್ಗೆ ಉಪಹಾರ ಸೇವಿಸಿದ್ದು, ನಂತರ ಏಕಾಏಕಿ ವಾಂತಿ ಮಾಡಿಕೊಂಡು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥ ವಿದ್ಯಾರ್ಥಿನಿಯರನ್ನು ಜೇವರ್ಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಫುಡ್ ಪಾಯಿಸನ್​ನಿಂದಾಗಿ ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಶಂಕೆ ವ್ಯಕ್ತವಾಗಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ad
Ad
Nk Channel Final 21 09 2023
Ad