Bengaluru 22°C
Ad

ಮಲ್ಲಿಕಾರ್ಜುನ ಖರ್ಗೆ ಪರಮಾಪ್ತ ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ನಿಧನ

ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ (81) ವಿಧಿವಶರಾಗಿದ್ದಾರೆ. ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಸುಕಿನ ಜಾವ 1 ಗಂಟೆಗೆ ನಿಧನರಾಗಿದ್ದಾರೆ.

ಕಲಬುರಗಿ: ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ (81) ವಿಧಿವಶರಾಗಿದ್ದಾರೆ. ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಸುಕಿನ ಜಾವ 1 ಗಂಟೆಗೆ ನಿಧನರಾಗಿದ್ದಾರೆ.

ಇಕ್ಬಾಲ್ ಅಹ್ಮದ್ ಸರಡಗಿ ಧೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಇವರ ಸಾವಿಗೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಮಾಜಿ ಸಂಸದ ಇಕ್ಬಾಲ್ ಅಹ್ಮದ್ 1999 ಮತ್ತು 2004 ರಲ್ಲಿ ಎರಡು ಬಾರಿ ಸಂಸದರಾಗಿ, 1 ಬಾರಿ ಎಮ್‌ಎಲ್‌ಸಿ ಆಗಿ ಸೇವೆ ಸಲ್ಲಿಸಿದ್ದಾರೆ. 2009 ರಲ್ಲಿ ಕಲಬುರಗಿ ಮೀಸಲು ಕ್ಷೇತ್ರವಾದ ನಂತ್ರ ಮಲ್ಲಿಕಾರ್ಜುನ ಖರ್ಗೆಗೆ ಬಿಟ್ಟುಕೊಟ್ಟರು.

ದರ್ಗಾ ಪ್ರದೇಶದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಇಕ್ಬಾಲ್ ಅಹ್ಮದ್ ಸರಡಗಿಯವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಸಂಜೆ 6 ಗಂಟೆಗೆ ನಗರದಲ್ಲಿ ಸರಡಗಿ ಅಂತ್ಯಕ್ರಿಯೆ ನೆರವೇರಲಿದೆ.

Ad
Ad
Nk Channel Final 21 09 2023
Ad