ಜೇವರ್ಗಿ: ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ರಿಲಯನ್ಸ್ ಪೆಟ್ರೋಲ್ ಪಂಪ್ ಬಳಿ ಮಂಗಳವಾರ ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನ ಕೈ ತುಂಡಾಗಿದ್ದು, ಸ್ಥಳೀಯರು ಪ್ರಯಾಣಿಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಪಘಾತದಿಂದ ಕೈ ತುಂಡಾದ ಯುವಕನನ್ನು ಜೇವರ್ಗಿ ತಾಲೂಕಿನ ರೇವನೂರು ಗ್ರಾಮದ ಅರುಣ್ ಕುಮಾರ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಜೇವರ್ಗಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ. ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಕಾಂಗ್ರೆಸ್ ಯುವ ನಾಯಕ ಇಮ್ರಾನ್ ಕುಕನೂರು ಅವರು ತಕ್ಷಣ ನೆರವಿಗೆ ಧಾವಿಸಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ಸಹಕರಿಸಿದರು.