Ad

ಕೋರ್ಟ್ ಆವರಣದಲ್ಲೇ ವ್ಯಕ್ತಿಯ ಮೇಲೆ ತಲವಾರನಿಂದ ಹಲ್ಲೆ

ಸಿನಿಮೀಯ ಶೈಲಿಯಲ್ಲಿ ಬೆನ್ನತ್ತಿ ಬಂದು ಕಲಬುರಗಿ ಜಿಲ್ಲಾ ಕೋರ್ಟ್ ಆವರಣದಲ್ಲೇ ವ್ಯಕ್ತಿಯ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ.

ಕಲಬುರಗಿ: ಸಿನಿಮೀಯ ಶೈಲಿಯಲ್ಲಿ ಬೆನ್ನತ್ತಿ ಬಂದು ಕಲಬುರಗಿ ಜಿಲ್ಲಾ ಕೋರ್ಟ್ ಆವರಣದಲ್ಲೇ ವ್ಯಕ್ತಿಯ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ.

Ad
300x250 2

ಧೀರಜ್ ಹಲ್ಲೆಗೊಳಗಾದ ವ್ಯಕ್ತಿ. ಪ್ರಶಾಂತ್ ಪಾಟೀಲ್ (20), ವೀರೇಶ್ ಪಾಟೀಲ್ (19), ರಾಮು ಪಾಟೀಲ್ (38) ಹಲ್ಲೆ ಮಾಡಿದ ಆರೋಪಿಗಳು. ತಲ್ವಾರ್ ದಾಳಿಯಿಂದ ಧೀರಜ್‌ಗೆ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಲ್ಲೆ ಮಾಡುತ್ತಿದ್ದ ವೇಳೆ ಕೋರ್ಟ್​​ ಆವರಣದಲ್ಲಿದ್ದ ಸಾರ್ವಜನಿಕರು ಮತ್ತು ವಕೀಲರು ಆರೋಪಿಗಳನ್ನು ತಡೆದಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ವಯುಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad
Ad
Nk Channel Final 21 09 2023
Ad