Ad

ಆಸ್ಪತ್ರೆಯಲ್ಲಿ ಆಕ್ಸಿಜನ್‌ ಟ್ಯಾಂಕ್‌ ಸೋರಿಕೆ: ಭಯಭೀತರಾದ ಸಾರ್ವಜನಿಕರು

ಆಕ್ಸಿಜನ್ ಸೋರಿಕೆ ಆಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ‌ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆ ಹಿಂಭಾಗದಲ್ಲಿದ್ದ ಆಕ್ಸಿಜನ್ ಘಟಕದಿಂದ ಸೋರಿಕೆಯಾಗಿ ಅರ್ಧ ಕಿಮೀ ವ್ಯಾಪ್ತಿವರೆಗೂ ವಾಸನೆ  ಹರಡಿದೆ.

ಕಲಬುರಗಿ: ಆಕ್ಸಿಜನ್ ಸೋರಿಕೆ ಆಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ‌ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆ ಹಿಂಭಾಗದಲ್ಲಿದ್ದ ಆಕ್ಸಿಜನ್ ಘಟಕದಿಂದ ಸೋರಿಕೆಯಾಗಿ ಅರ್ಧ ಕಿಮೀ ವ್ಯಾಪ್ತಿವರೆಗೂ ವಾಸನೆ  ಹರಡಿದೆ.

Ad
300x250 2

ಆಸ್ಪತ್ರೆಯೊಳಗೆ ಇದ್ದ ಸಿಬ್ಬಂದಿ, ರೋಗಿಗಳು ಭಯಭೀತರಾಗಿ ಹೊರಗೆ ಓಡಿ ಬಂದು ಆವರಣದೊಳಗೆ ಬಂದು ಕುಳಿತುಕೊಳ್ಳುವಂತಾಯಿತು. ಇತ್ತ ಆಕ್ಸಿಜನ್‌ ಟ್ಯಾಂಕ್‌ ಸ್ಫೋಟಗೊಂಡಿದೆ ಎಂಬ ಸುದ್ದಿಯಿಂದಾಗಿ ವೈದ್ಯರು ಮತ್ತು ಸಿಬ್ಬಂದಿ ತಗ್ಗಿದ ವಸತಿಗೃಹಗಳನ್ನು ಖಾಲಿ ಮಾಡಿದ್ದವು.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಚಿಂಚೊಳ್ಳಿ ಪೊಲೀಸರು ದೌಡಾಯಿಸಿದ್ದರು. ಪರಿಶೀಲನೆ ನಡೆಸಿದಾಗ ಆಕ್ಸಿಜನ್‌ ಟ್ಯಾಂಕ್ ತುಂಬಿದ್ದರಿಂದ ಅದರ ಒತ್ತಡವನ್ನು ಹೊರಹಾಕಿದೆ ಎಂದು ಗೊತ್ತಾಗಿದೆ. ಈ ಕುರಿತು ಮಾಹಿತಿ ನೀಡಿರುವ ಕಲಬುರಗಿ ಡಿ.ಎಚ್.ಓ ಡಾ.ರತಿಕಾಂತ್ ಸ್ವಾಮಿ, ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂಬುದು ಸುಳ್ಳು ಸುದ್ದಿ. ಸಾರ್ವಜನಿಕರು ಆತಂಕ ಪಡಬೇಕಿಲ್ಲ ಎಂದು ಸ್ಪಷ್ಟಪಡಿಸಿದರು.

ಆಕ್ಸಿಜನ್‌ ಟ್ಯಾಂಕ್ ತುಂಬಿದ ನಂತರ ಅದರ ಒತ್ತಡವನ್ನು ಗ್ಯಾಸ್ ರೂಪದಲ್ಲಿ ಹೊರಹಾಕುವ ಸಾಮಾನ್ಯ ಪ್ರಕ್ರಿಯೆ ಆಗಿದೆ. ಆಸ್ಪತ್ರೆಯಲ್ಲಿನ 6 ಕೆ.ಎಲ್. ಸಾಮರ್ಥ್ಯದ ಟ್ಯಾಂಕಿಗೆ ಆಮ್ಲಜನಕ ಭರ್ತಿ ಮಾಡಿದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಎ, ಬಿ, ಸಿ ಎಂಬ ಸುರಕ್ಷತೆಯ ವಾಲ್‌ಗಳ ಮುಖೇನ ಹಂತ ಹಂತವಾಗಿ ಗ್ಯಾಸ್ ಲೀಕ್ ಮಾಡುತ್ತದೆ. ಹೀಗಾಗಿ ಸಾರ್ವಜನಿಕರು ಯಾರು ಆತಂಕ ಪಡಬೇಕಾಗಿಲ್ಲಾ ಎಂದರು.

Ad
Ad
Nk Channel Final 21 09 2023
Ad