ಕಲಬುರಗಿ: ಯಾವುದೇ ಸಂಘಗಳೇ ಆಗಲಿ ಸಂವಿಧಾನದ ಎದುರು ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿರುವ ಅವರು, ಸಂವಿಧಾನಕ್ಕೆ ತಲೆಬಾಗಿದರೆ ಮಾತ್ರ ಬದುಕು ಸುಂದರ. ಸಂವಿಧಾನಕ್ಕೆ ಸವಾಲು ಹಾಕಿದರೆ ಬದುಕು ದುಸ್ಥರ. ಆರೆಸ್ಸೆಸ್ ಸಂಘಟನೆಗೆ ಈ ಸತ್ಯದ ಅರಿವಾಗಿದೆ ಎಂದು ಭಾವಿಸಿದ್ದೇನೆ. ಸಂವಿಧಾನ, ಕಾನೂನುಗಳು ನಮಗೆ ಅನ್ವಯಿಸುವುದಿಲ್ಲ ಎಂಬಂತೆ ನಡೆದುಕೊಳ್ಳುತ್ತಿದ್ದ ಆರೆಸ್ಸೆಸ್‌ಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ.

ಯಾವುದೇ ಸಂಘಗಳು, ವ್ಯಕ್ತಿಗಳು ಇದನ್ನು ಅರ್ಥೈಸಿಕೊಂಡು ನೀತಿ, ನಿಯಮಗಳಿಗೆ ಬದ್ಧರಾಗಿ ನಡೆಯಬೇಕು. ಸರ್ಕಾರ ಮತ್ತು ಕಲಬುರಗಿ ಜಿಲ್ಲಾಡಳಿತ ರೂಪಿಸಿರುವ ಮಾನದಂಡಗಳನ್ನು ಒಪ್ಪಿ ನಿಯಮಗಳಿಗೆ ಅನುಸಾರವಾಗಿ ಆರೆಸ್ಸೆಸ್ ತಮ್ಮ ಕಾರ್ಯಕ್ರಮ ನಡೆಸಬೇಕು ಎಂದು ಹೇಳಿದ್ದಾರೆ.