Bengaluru 29°C
Ad

ಮರದಡಿ ನಿಂತು ಆಸರೆ ಪಡೆದಿದ್ದ ವೇಳೆ ಕಿವಿಗೆ ಹಾವು ಕಚ್ಚಿ ಮಹಿಳೆ ಸಾವು

Kalburgi (1)

ಕಲಬುರಗಿ: ಹಾವು ಕಡಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ವಿಜಯಲಕ್ಷ್ಮಿ ತೆಳಗೇರಿ (44) ಮೃತ ದುರ್ದೈವಿ. ಕಲಬುರಗಿಯ ಸೂಗೂರು ಗ್ರಾಮದ ಹೊರವಲಯದ ಜಮೀನಿನಲ್ಲಿ ಘಟನೆ ನಡೆದಿದೆ.

Ad
300x250 2

ಚಿತ್ತಾಪುರ ತಾಲೂಕಿನ ಸೂಗೂರು(N)ಗ್ರಾಮದ ವಿಜಯಲಕ್ಷ್ಮಿ ಕೂಲಿ ಕೆಲಸಕ್ಕಾಗಿ ಜಮೀನಿಗೆ ತೆರಳಿದ್ದರು.ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ದಿಢೀರ್‌ ಮಳೆ ಶುರುವಾಗಿತ್ತು. ಹೀಗಾಗಿ ಮಳೆ ನಿಂತ ಮೇಲೆ ಮನೆಗೆ ಹೋಗೋಣಾವೆಂದು ಮರದಡಿ ನಿಂತು ಆಸರೆ ಪಡೆದಿದ್ದರು.

ಆದರೆ ಹಾವು ಮರದಲ್ಲಿ ಇರುವುದನ್ನು ಗಮನಿಸಿದೇ ಮರದ ಕೆಳಗೆ ಆಸರೆ ಪಡೆದಿದ್ದಾರೆ. ಈ ವೇಳೆ ಮಹಿಳೆಯ ಕಿವಿಗೆ ಹಾವು ಕಚ್ಚಿದ್ದು, ಅಸ್ವಸ್ಥಗೊಂಡ ವಿಜಯಲಕ್ಷ್ಮಿ ಕುಸಿದು ಬಿದ್ದಿದ್ದಾರೆ. ಅಲ್ಲಿದ್ದವರು ವಿಜಯಲಕ್ಷ್ಮಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಆದಾಗಲೇ ಹಾವಿನ ವಿಷವೇರಿದ್ದರಿಂದ ಆಕೆ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಸದ್ಯ ವಾಡಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Ad
Ad
Nk Channel Final 21 09 2023
Ad