Ad

ವಿದ್ಯಾರ್ಥಿಗಳ ಅನಾನುಕೂಲಕ್ಕೆ ಸರಕಾರವೇ ಕಾರಣ :ಶೈಕ್ಷಣಿಕ ವೇಳಾಪಟ್ಟಿಗನುಗುಣವಾಗಿ ಬಸ್ ಪಾಸ್ ವಿತರಿಸಿ

ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿಗನುಗುಣವಾಗಿ ಬಸ್ ಪಾಸ್ ವಿತರಣೆ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕೆ ಬಸ್ಸುಗಳ ಸಂಖ್ಯೆ ಹೆಚ್ಚಳ ಮಾಡುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಅಫಜಲಪುರ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಕಲಬುರಗಿ: ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿಗನುಗುಣವಾಗಿ ಬಸ್ ಪಾಸ್ ವಿತರಣೆ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕೆ ಬಸ್ಸುಗಳ ಸಂಖ್ಯೆ ಹೆಚ್ಚಳ ಮಾಡುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಅಫಜಲಪುರ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

Ad
300x250 2

ಅಫಜಲಪುರ ಪಟ್ಟಣದ ಬಸವೇಶ್ವರ ವೃತ್ತದಿಂದ ತಹಶೀಲ್ದಾರ ಕಚೇರಿಯ ವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಎಬಿವಿಪಿ ಪ್ರಾಂತ ಸಹಾಯಕ ಸಹ ಕಾರ್ಯದರ್ಶಿ ಗಂಗಾಧರ ಹಂಜಗಿ,ಸರಕಾರ ವಿದ್ಯಾರ್ಥಿಗಳ ಜೀವನದ ಜೊತೆ ಆಟವಾಡುತ್ತಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪಟ್ಟಣಗಳಿಗೆ ತೆರಳಿ ವಿದ್ಯಾಭ್ಯಾಸ ಮಾಡಲು ಸರಿಯಾದ ಬಸ್ ವ್ಯವಸ್ಥೆಗಳಿಲ್ಲ.

ಅದಲ್ಲದೇ ಶೈಕ್ಷಣಿಕ ವೇಳಾಪಟ್ಟಿಗನುಗುಣವಾಗಿ ಬಸ್ ಪಾಸ್ ವಿತರಣೆ ಮಾಡುವುದಿಲ್ಲ. ಇಂದಿನ ವಿದ್ಯಾರ್ಥಿಗಳು ಮುಂದಿನ ದೇಶ ಕಟ್ಟುವ ಪ್ರಜೆಗಳು ಎಂದು ರಾಜಕಾರಣಿಗಳ ಬಾಯಿಯಲ್ಲಿದೆ ಹೊರತು ಕಾರ್ಯರೂಪದಲ್ಲಿಲ್ಲ. ಸರಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಮಾಡಿರುವುದರಿಂದ ರಾಜ್ಯದ ಮೂಲೆಮೂಲೆಗಳಲ್ಲಿ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಬಸ್ಸುಗಳ ಅಡಚಣೆಯಾಗುತ್ತಿವೆ.

ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಬಣ್ಣಗಳ ವ್ಯವಸ್ಥೆ ಮಾಡಬೇಕು ಎಂದರು. ವಿದ್ಯಾರ್ಥಿಗಳ ಅನುಕೂಲಕ್ಕೆ ಸರಿಯಾದ ಬಸ್ ವ್ಯವಸ್ಥೆ ಕಲ್ಪಿಸದಿದ್ದರೆ ವಿದ್ಯಾರ್ಥಿಗಳೊಂದಿಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸರ್ಕಾರದ ವಿರುದ್ದ ಕಹಳೆ ಉದಲಿದೆ ಎಂದರು. ನಂತರ ತಹಶೀಲ್ದಾರರ ಮುಖಾಂತರ ಸಾರಿಗೆ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು.

ಇದೇ  ಸಂದರ್ಭದಲ್ಲಿ ಎಬಿವಿಪಿ ವಿಭಾಗೀಯ ಸಹಾಯಕ ಕಾರ್ಯದರ್ಶಿ ಪಾಂಡು ಮೊರೆ, ಜಿಲ್ಲಾ ಸಂಚಾಲಕ ಮನೋಜ ಪಾಟೀಲ, ದಿಲೀಪ ಸೇರಿದಂತೆ ವಿದ್ಯಾರ್ಥಿಗಳಾದ ಭಾಗ್ಯಶ್ರೀ ಮ್ಯಾಕೇರಿ,ಲಕ್ಷ್ಮಿ ಹಿರೇಮಠ, ದರ್ಶನ ನಾಟೀಕಾರ, ಶಶಿಕುಮಾರ್ ಸೋಮಜಾಳ, ಮಲ್ಲಿಕಾರ್ಜುನ, ಪ್ರಶಾಂತ, ಅಶ್ವಿನಿ, ಕಾವೇರಿ, ರಾಧಿಕಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Ad
Ad
Nk Channel Final 21 09 2023
Ad