Ad

ಧಾರಾಕಾರ ಮಳೆ : ಹಳ್ಳದ ನೀರಿನ ಅವಾಂತರಕ್ಕೆ ಜೋಡೆತ್ತುಗಳು ಬಲಿ

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ಅವರ ಕುಮ್ಮಕ್ಕಿನಿಂದ ಹತ್ಯೆಗೀಡಾದ ಚಿತ್ರದುರ್ಗದ ಮೂಲದ ರೇಣುಕಾಸ್ವಾಮಿ ಕೊಲೆ ಖಂಡಿಸಿ ಹುಬ್ಬಳ್ಳಿಯಲ್ಲಿ ಕರ್ನಾಟಕ ರಾಜ್ಯ ಬೇಡ ಜಂಗಮ ಸಂಘಟನೆ ಪ್ರತಿಭಟನೆ ನಡೆಸಿದು

ಕಲಬುರಗಿ: ಆಳಂದ ತಾಲ್ಲೂಕಿನ ಕಮಲಾನಗರ ಗ್ರಾಮದಲ್ಲಿ ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಹಳ್ಳದ ನೀರು ದನದ ಕೊಟ್ಟಿಗೆಗೆ ನುಗ್ಗಿ ಜೋಡೆತ್ತುಗಳು ಸ್ಥಳದಲ್ಲೇ ಮೃತಪಟ್ಟಿವೆ.ರೈತ ಕಲ್ಯಾಣಿ ಬಸವರಾಜ ಕೆರುಳ್ಳಿ ಅವರಿಗೆ ಸೇರಿ ಎರಡು ಎತ್ತುಗಳು ಮೃತಪಟ್ಟಿವೆ.ಕೃಷಿ ಪರಿಕರಗಳು ಕೊಚ್ಚಿಹೋಗಿದ್ದು, ಸುಮಾರು ₹1.50 ಲಕ್ಷ ಹಾನಿಯಾಗಿದೆ.

Ad
300x250 2

ಕಲ್ಯಾಣಿ ಅವರು ಮಂಗಳವಾರ ಸಂಜೆ ತಮ್ಮ ಜಮೀನಿನ ಕೊಟ್ಟಿಗೆಯಲ್ಲಿ ಎತ್ತುಗಳನ್ನು ಕಟ್ಟಿ ಮನೆಗೆ ಬಂದಿದ್ದರು. ರಾತ್ರಿಯಿಡಿ ರಭಸದಿಂದ ಮಳೆ ಸುರಿದಿದೆ. ಕಮಲಾನಗರ- ಬೆಡಜುರ್ಗಿ ಮಧ್ಯದ ಗಡಿಹಳ್ಳದಲ್ಲಿ ಪ್ರವಾಹ ಉಂಟಾಗಿದೆ. ಪ್ರವಾಹದ ನೀರು ದನದ ಕೊಟ್ಟಿಗೆಗೆ ನುಗ್ಗಿದ್ದು, ದನಗಳನ್ನ ದಾವಣಿಗೆ ಕಟ್ಟಿದ್ದರಿಂದ ಪ್ರವಾಹ ಎದುರಿಸಲು ಆಗದೆ ಉಸಿರು ಗಟ್ಟಿ ಸ್ಥಳದಲ್ಲೇ ಮೃತಪಟ್ಟಿವೆ. ಸುಮಾರು ₹1 ಲಕ್ಷ ಮೌಲ್ಯದ ಎತ್ತು ಹಾಗೂ ₹50 ಸಾವಿರ ಮೌಲ್ಯದ ಪಂಪ್‌ಸೆಟ್, ಸ್ಪಿಂಕಲರ್ ಪೈಪ್‌ ಕೊಚ್ಚಿ ಹೋಗಿವೆ ಎಂದು ಕಲ್ಯಾಣಿ ತಿಳಿಸಿದರು.

ಪಶು ವೈದ್ಯಾಧಿಕಾರಿ ಬಸವರಾಜ ಸಪ್ಪಾಣಿ, ಕಂದಾಯ ನಿರೀಕ್ಷಕ ಮಲ್ಲಿನಾಥ ಮರಗುತ್ತಿ, ಗ್ರಾಮ ಲೆಕ್ಕಾಧಿಕಾರಿ ಸುನಿತಾ ಮತ್ತಿತರರು ಭೇಟಿ ನೀಡಿ ಪರಿಶೀಲಿಸಿದರು.

Ad
Ad
Nk Channel Final 21 09 2023
Ad