ಕಲಬುರಗಿ

ಇಡೀ ವಿಶ್ವಕ್ಕೆ ನರೇಂದ್ರ ಮೋದಿ ಮಾರ್ಗದರ್ಶನ ಮಾಡುವ ನಾಯಕ : ಆರ್.ಅಶೋಕ

ಕಲಬುರಗಿ: ಇಡೀ ವಿಶ್ವಕ್ಕೆ ನರೇಂದ್ರ ಮೋದಿ ಮಾರ್ಗದರ್ಶನ ಮಾಡುವ ನಾಯಕ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ.

ಅವರು ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮನಮೋಹನ್ ಸಿಂಗ್ ಪ್ರಧಾನಿ ಇದ್ದಾಗ ಬೇರೆ ದೇಶದವರು ಯಾರಾದರೂ ಕರೆಯುತ್ತಿದ್ದರಾ ಎಂದು ಪ್ರಶ್ನಿಸಿದರು.

ಕಳೆದ ಲೋಕ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇಡೀ ದೇಶ ತಕ್ಕ ಪಾಠ ಕಲಿಸಿದೆ. 120 ವಷ೯ದ ಪಕ್ಷ, 20 ಸ್ಥಾನ ಗೆಲ್ಲಲು ಸಾಧ್ಯವಾಗಿಲ್ಲ ಎಂದರು.

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಹೋಗಿ, ಪ್ರಾಧೇಶಿಕ ಪಕ್ಷವಾಗಿ ಹೊರಹೊಮ್ಮುತ್ತಿದೆ. ಲಾಲು ಪ್ರಸಾದ್ ಯಾದವ ಅಥವಾ ಬೇರೆ ಯಾವದಾದರೂ ಪಕ್ಷದ ಜೊತೆಗೆ ಕಾಂಗ್ರೆಸ್ ಸೇರಿಕೊಳ್ಳಲಿ ಎಂದರು.

ಕಾಂಗ್ರೆಸ್ ಪಕ್ಷವೇ ಅಡಾಕ್ ಪಕ್ಷವಾಗಿದೆ. ಈಗೇನಿದ್ದರೂ ಕಾಂಗ್ರೆಸ್ ಒಡೆದ ಮನೆಯಾಗಿದೆ. ಕಾಂಗ್ರೆಸ್ ಪಕ್ಷದವರು ಮೊದಲು ತಮ್ಮ ಮನೆಯನ್ನೇ ತೊಳೆದುಕೊಳ್ಳಲು ಆಗಲಿಲ್ಲ. ಬೇರೆಯವರ ಮನೆ ಬಗ್ಗೆ ಮಾತನಾಡುತ್ತಾರೆ ಎಂದರು.

ಉಗ್ರಪ್ಪಾ, ಸಲೀಂ ಅಹ್ಮದ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಡಿಕೆಶಿ, ನ್ನು ಸೈಡ್ ಲೈನ್ ಮಾಡುವುದಕ್ಕೆ ಕಾಂಗ್ರೆಸ್ ಮುಂದಾಗಿದೆ. ಕಾಂಗ್ರೆಸ್ ಕುತಂತ್ರ ರಾಜಕೀಯಕ್ಕೆ ಹೆಸರುವಾಸಿಯಾಗಿದೆ ಎಂದರು.

ರಾಹುಲ್ ಗಾಂಧಿ ಡ್ರಗ್ ಫೆಡ್ಲರ್ ನಳಿನ್ ಕುಮಾರ್ ಕಟಿಲ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಕಟಿಲ್ ಆವರು ಎನೂ ಹೇಳಿದ್ದಾರೆ,ನನಗೆ ಗೊತ್ತಿಲ್ಲ. ಆದರ ಬಗ್ಗೆ ತಿಳಿದುಕೊಂಡು ಮಾತನಾಡುತ್ತೇನೆ ಎಂದರು.

Sneha Gowda

Recent Posts

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

44 mins ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

59 mins ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

2 hours ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

2 hours ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

2 hours ago