ಕಲಬುರಗಿ

ಕೆಕೆಆರ್‌ಡಿಬಿಗೆ ₹ 3 ಸಾವಿರ ಕೋಟಿ ಅನುದಾನ: ಸಿ.ಎಂ. ಘೋಷಣೆ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಸ್ಥಾಪನೆಯಾದ ಕಲ್ಯಾಣ ‌ಕರ್ನಾಟಕ ಪ್ರದೇಶ ‌ಅಭಿವೃದ್ಧಿ ಮಂಡಳಿ (ಕೆಕೆಆರ್ ಡಿಬಿ)ಗೆ ನೀಡಲಾಗುತ್ತಿರುವ ಅನುದಾನವನ್ನು ₹ 1500 ಕೋಟಿ ಅನುದಾನದ ಜೊತೆಗೆ ಹೆಚ್ಚುವರಿ ₹ 1500 ಕೋಟಿ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ಘೋಷಿಸಿದರು.

ಇಲ್ಲಿನ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ‌ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಭಾಗದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ರಾಜ್ಯ ಸರ್ಕಾರ ಇಲ್ಲಿಯವರೆಗೆ ₹ 8 ಸಾವಿರ ‌ಕೋಟಿಗೂ ಅಧಿಕ ಮೊತ್ತವನ್ನು ಬಿಡುಗಡೆ ಮಾಡಿದ್ದೇವೆ. ಆ ಪೈಕಿ ₹ 6 ಸಾವಿರ ಕೋಟಿ ಖರ್ಚಾಗಿದೆ. ಉಳಿದ ₹ 2 ಸಾವಿರ ಕೋಟಿಯನ್ನು ಬರುವ ಮಾರ್ಚ್ ನೊಳಗೆ ಖರ್ಚು ಮಾಡಬೇಕು. ಅಂದಾಗ ಮಾತ್ರ ಹೆಚ್ಚುವರಿ ₹ 1500 ಕೋಟಿಯನ್ನು ಬಿಡುಗಡೆ ಮಾಡುತ್ತೇನೆ ಎಂದು ಷರತ್ತು ವಿಧಿಸಿದರು.

371 (ಜೆ) ಕಲಂನಡಿ ಯೋಜನೆಗಳನ್ನು ಜಾರಿಗೊಳಿಸುವ ಹೊಣೆ ಹೊತ್ತಿರುವ ಕೋಶವನ್ನು ‌ಕಲಬುರ್ಗಿಗೆ ಸ್ಥಳಾಂತರಿಸಲಾಗುವುದು. ನಾನು ಯಾವುದೇ ಹೊಸ ಘೋಷಣೆಗಳನ್ನು ‌ಹೊರಡಿಸುವುದಿಲ್ಲ.‌ ಈಗಾಗಲೇ ಇರುವ ಯೋಜನೆಗಳನ್ನು ‌ಪೂರ್ಣಪ್ರಮಾಣದಲ್ಲಿ ಅನುಷ್ಠಾನಗೊಳಿಸಲು‌ ಗಮನ ಹರಿಸುತ್ತೇನೆ ಎಂದರು.

 

Sampriya YK

Recent Posts

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

1 min ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

34 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

59 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago