ಕಲಬುರಗಿ

ಗುಲ್ಬರ್ಗಾ ವಿವಿಯ ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆ ಆಗಸ್ಟ್ 2 ರಿಂದ

ಕಲಬುರಗಿ: ಕೋವಿಡ್ ಭೀತಿಯಿಂದ ಮುಂದೂಡಲ್ಪಟ್ಟಿದ್ದ ಗುಲಬರ್ಗಾ ವಿಶ್ವವಿದ್ಯಾಲಯದ ಬಿಎ, ಬಿಎಸ್ಸಿ, ಬಿಕಾಂ ಹಾಗೂ ಸ್ನಾತಕೋತ್ತರ ಪದವಿ ಸೇರಿ ಇನ್ನಿತರ ಪದವಿ ಕೋರ್ಸ್‍ಗಳ ಮೊದಲನೇ, ಮೂರನೇ ಹಾಗೂ ಐದನೇ ಸೆಮಿಸ್ಟರ್ ಪರೀಕ್ಷೆಗಳನ್ನು ಇದೇ ಆಗಸ್ಟ್ 2 ರಿಂದ ನಡೆಸಲಾಗುತ್ತದೆ ಎಂದು ಗುಲಬರ್ಗಾ ವಿವಿಯ ಕುಲಪತಿಗಳಾದ ಪ್ರೊ. ದಯಾನಂದ ಅಗಸರ್ ಹೇಳಿದರು.

ಮಂಗಳವಾರ ಇಲ್ಲಿನ ಗುಲಬರ್ಗಾ ವಿವಿಯ ಕಾರ್ಯಸೌಧದ ರಾಧಾಕೃಷ್ಣ ಸಭಾಂಗಣದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉನ್ನತ ಶಿಕ್ಷಣ ಪರಿಷತ್ ಹಾಗೂ ಯುಜಿಸಿಯ ಮಾರ್ಗಸೂಚಿಗಳ ಅನ್ವಯ ಪರೀಕ್ಷೆ ನಡೆಸಲಾಗುತ್ತಿದ್ದು, 4 ಜಿಲ್ಲೆಗಳ ಸುಮಾರು 150 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 1 ಲಕ್ಷ 20 ಸಾವಿರ ಪದವಿ ಹಾಗೂ 12 ಸಾವಿರ ಸ್ನಾತಕೋತ್ತರ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹಾಜರಾಗಲಿದ್ದಾರೆ ಎಂದು ಅವರು ವಿವರಿಸಿದರು.

ಮೊದಲನೇ, ಮೂರನೇ ಹಾಗೂ ಐದನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಆಧರಿಸಿ 2 ಹಾಗೂ 4ನೇ ಸೆಮಿಸ್ಟರ್ ಪದವಿ ವಿದ್ಯಾರ್ಥಿಗಳನ್ನು ಹಾಗೂ 2 ನೇ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಪ್ರಮೋಟ್ ಮಾಡಲಾಗುವುದರ ಮೂಲಕ ಮುಂದಿನ ತರಗತಿಗೆ ತೇರ್ಗಡೆಗೊಳಿಸಲಾಗುವುದು. ಇದಲ್ಲದೆ 6ನೇ ಸೆಮಿಸ್ಟರ್ ಪದವಿ ವಿದ್ಯಾರ್ಥಿಗಳಿಗೆ ಹಾಗೂ 4 ನೇ ಸೆಮಿಸ್ಟರ್ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಜುಲೈ 28ರಿಂದ ಬಿಎಡ್ ಪರೀಕ್ಷೆ: ಈಗಾಗಲೇ ತರಗತಿ ಮುಗಿಸಿರುವ ಬಿಎಡ್ ವಿದ್ಯಾರ್ಥಿಗಳಿಗೆ ಇದೇ ಜುಲೈ 28 ರಿಂದ ಪರೀಕ್ಷೆಗಳನ್ನು ನಡೆಸಲಾಗುವುದು. ವಿವಿ ವ್ಯಾಪ್ತಿಯ 4 ಜಿಲ್ಲೆಗಳ 9200 ವಿದ್ಯಾರ್ಥಿಗಳು ಬಿ.ಎಡ್ ಪರೀಕ್ಷೆ ಎದುರಿಸಲು ಸಿದ್ಧವಾಗಿದ್ದು, 26 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿವೆ ಎಂದು ಕುಲಪತಿ ಅಗಸರ್ ಅವರು ತಿಳಿಸಿದರು.

ಪರೀಕ್ಷೆಗಳು ಯುಜಿಸಿ ಹಾಗೂ ಸರ್ಕಾರದ ಅನುಸಾರದಂತೆ ನಡೆಯಲಿವೆ. ಈಗಾಗಲೇ ಶೇ. 70 ರಷ್ಟು ವಿದ್ಯಾರ್ಥಿಗಳು ಹಾಗೂ ಶೇ. 90 ರಷ್ಟು ಶಿಕ್ಷಕರು ಕೋವಿಡ್ ಲಸಿಕೆ ಪಡೆದಿದ್ದಾರೆ. ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬರೂ ಸಹ ಕನಿಷ್ಠ ಪಕ್ಷ ಒಂದು ಡೋಸ್ ಆದರೂ ಪಡೆದಿರಬೇಕು. ಅದಲ್ಲದೆ ವಿವಿಯ ವ್ಯಾಪ್ತಿಗೆ ಬರುವ 4 ಜಿಲ್ಲೆಗಳ 1.25 ಲಕ್ಷ ವಿದ್ಯಾರ್ಥಿಗಳು 2020-21 ನೇ ಸಾಲಿನ ಪರೀಕ್ಷೆಗೆ ಹಾಜರಾಗಲಿದ್ದಾರೆ. ಎನ್.ಸಿ.ಇ.ಟಿ. ಮಾನ್ಯತೆ ಪಡೆದ ಮಹಾವಿದ್ಯಾಲಯಗಳಲ್ಲಿ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ವಿವಿಯ ಕುಲಸಚಿವ ಶರಣಬಸಪ್ಪ ಕೊಟ್ಟೇಪ್ಪಗೋಳ, ಮೌಲ್ಯಮಾಪನ ಕುಲಸಚಿವ ಸೋನಾರ್ ನಂದಪ್ಪ, ವಿತ್ತಾಧಿಕಾರಿ ಬಿ. ವಿಜಯ ಹಾಗೂ ವಿವಿಧ ನಿಕಾಯಗಳ ಡೀನರುಗಳು ಉಪಸ್ಥಿತರಿದ್ದರು.

Sampriya YK

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

7 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

7 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

8 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

8 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

8 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

8 hours ago