ಕಲಬುರಗಿ: ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಮಡಕಿ ತಾಂಡಾ ಬಳಿ 2 ಬೈಕ್ಗಳು ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವಿಗೀಡಾಗಿದ್ದಾರೆ.
ಅಂಬರೀಶ್, ಅನಿಲ್ ಗುತ್ತೇದಾರ್ ಮತ್ತು ನಾಗೇಶ್ ದುರ್ಮರಣಕ್ಕೀಡಾಗಿದ್ದಾರೆ.
ಮತ್ತೊಬ್ಬ ಯುವಕ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ನರೋಣಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.