Categories: ಕಲಬುರಗಿ

ಮುಂಬರುವ ಪಂಚಾಯಿತಿ ಚುನಾವಣೆಯಲ್ಲೂ ಇದೇ ಒಗ್ಗಟ್ಟಿನಿಂದ ಮೈಲುಗೈ ಸಾಧಿಸುವಂತಾಗಬೇಕು : ವಿ. ಸುನೀಲಕುಮಾರ

ಕಲಬುರಗಿ : ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅತ್ಯಂತ ಹುರುಪಿನ ಹೋರಾಟ ಮಾಡಿ ಮೇಲುಗೈ ಸಾಧಿಸಿದಂತೆ, ಮುಂಬರುವ ಪಂಚಾಯಿತಿ ಚುನಾವಣೆಗಳಲ್ಲೂ ಇದೇ ಒಗ್ಗಟ್ಟಿನಿಂದ ಮೈಲುಗೈ ಸಾಧಿಸುವಂತಾಗಬೇಕು ಎಂದು ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ವಿ. ಸುನೀಲಕುಮಾರ ಆಶಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಪಕ್ಷದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಪಾಲಿಕೆ ಚುನಾವಣೆಯಲ್ಲಿ ಭಾರಿ ಒಗ್ಗಟ್ಟಿನಿಂದ ಮತದಾರರ ಮನವೊಲಿಸುವಲ್ಲಿ ಶಾಸಕರು, ಎಂಎಲ್‌ಸಿಗಳು ಸೇರಿದಂತೆ ಎಲ್ಲ ಚುನಾಯಿತ ಪ್ರತಿನಿಧಿಗಳು ಮತ್ತು ಮುಖಂಡರು ಶ್ರಮ ಪಟ್ಟಿರುವುದರಿಂದಾಗಿ ಪಾಲಿಕೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಲಾಗಿದೆ. ಅಲ್ಲದೆ, ಅಧಿಕಾರವೂ ಹಿಡಿಯಲಿದ್ದೇವೆ ಎಂದರು.

ಇದೇ ಒಗ್ಗಟ್ಟು ಮತ್ತು ಹುರುಪಿನಿಂದ ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ಬೇಕಾದ ಎಲ್ಲ ತಂತ್ರಗಳನ್ನು, ತಯಾರಿಗಳನ್ನು ಮಾಡಿಕೊಳ್ಳಬೇಕು ಎಂದು ಹೇಳಿದರು. ಈ ವೇಳೆಯಲ್ಲಿ ಶಾಸಕ ಬಸವರಾಜ ಮತ್ತಿಮೂಡ, ಕ್ರೆಡಲ್ ಅಧ್ಯಕ್ಷ ಚಂದು ಪಾಟೀಲ್, ಮಾಜಿ ಎಂಎಲ್‌ಸಿ ಅಮರನಾಥ ಪಾಟೀಲ, ಕೃಷ್ಣಾ ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್, ನಗರ ಅಧ್ಯಕ್ಷ ಸಿದ್ದಾಜಿ ಪಾಟೀಲ, ಮುಖಂಡರಾದ ಪ್ರಲ್ಹಾದ ಭಟ್ ಪೂಜಾರಿ, ಪರಶುರಾಮ ನಸಲವಾಯಿ ಇತರರಿದ್ದರು.

Sneha Gowda

Recent Posts

ದ.ಕ ಬರ ಪರಿಸ್ಥಿತಿ ಹಿನ್ನಲೆ ನೀರು ಪೂರೈಕೆಗೆ ಜಿಲ್ಲಾಡಳಿತ ಮುಂಜಾಗೃತ ಕ್ರಮ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಸಾರ್ವಜನಿಕರಿಗರ ಕುಡಿಯುವ ನೀರನ್ನು ಪೂರೈಸಲು ಜಿಲ್ಲಾಡಳಿತದಿಂದ ಈಗಾಗಲೇ ಸಾಕಷ್ಟು ಕ್ರಮ ಕೈಗೊಳ್ಳಲಾಗುತ್ತಿದೆ.…

6 mins ago

ಕಲ್ಲಡ್ಕದಲ್ಲಿ ಪ್ರಥಮ ಮಳೆಗೆ ಹದಗೆಟ್ಟ ರಾಷ್ಟ್ರೀಯ ಹೆದ್ದಾರಿ : ಸಂಚಾರ ಅಸ್ತವ್ಯಸ್ತ

ನಿನ್ನೆ ಸುರಿದ ಪ್ರಥಮ ಮಳೆಗೆ ಕಲ್ಲಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ತೊಡುಕುಂಟಾಗಿದೆ.

12 mins ago

ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣ: ಭಾರತೀಯ ಮೂಲದ ವ್ಯಕ್ತಿ ಬಂಧನ

ಕೆನಡಾದಲ್ಲಿ ಬಹುಕೋಟಿ ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ ವ್ಯಕ್ತಿಯನ್ನು ಟೊರೊಂಟೋ ವಿಮಾನ ನಿಲ್ದಾಣದಲ್ಲಿ ಅರೆಸ್ಟ್‌…

25 mins ago

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ : ಆನ್‌ಲೈನ್‌ನಲ್ಲಿ ಹೀಗೆ ನೋಡಿ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದೆ. ಈ ವರ್ಷದ ತೇರ್ಗಡೆ ಪ್ರಮಾಣ…

33 mins ago

ಪತ್ರಿಕಾ ವಿತರಕ ರೈಲಿಗೆ ಸಿಲುಕಿ ಆತ್ಮಹತ್ಯೆ

ರೈಲಿಗೆ ಸಿಲುಕಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಬಸವನಪುರ ಗ್ರಾಮದ ಬಳಿ ನಡೆದಿದೆ.

47 mins ago

ಮಲೆ ಮಾದಪ್ಪನಿಗೆ ಬೆಳ್ಳಿ ಆರತಿ ತಟ್ಟೆ ನೀಡಿದ ದಾನಿ : ಹೇಗಿದೆ ಗೊತ್ತಾ?

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನಲ್ಲಿರುವ ಪವಾಡ ಪುರುಷ ಶ್ರೀ ಮಲೆ ಮಹದೇಶ್ವರನಿಗೆ ಬೆಂಗಳೂರಿನ ನಾಗಮಣಿ.ಎಂ ಮತ್ತು ಕುಟುಂಬ 01 ಕೆಜಿ…

56 mins ago