ಕಲಬುರಗಿ : 15 ವರ್ಷದ ಬಾಲಕಿಗೆ ವಿಷ ಕುಡಿಸಿ ಹತ್ಯೆ ಮಾಡಿದ ಆರೋಪ ಕೇಳಿಬಂದಿದೆ. ಕಲಬುರಗಿ ತಾಲೂಕಿನ ಪಾಣೆಗಾಂವ್ ಗ್ರಾಮದ 15 ವರ್ಷದ ಬಾಲಕಿ ಪಾಯಲ್ ನಿನ್ನೆ ಸಂಜೆ ಕಟ್ಟಿಗೆ ತರಲು ಮನೆ ಹಿಂದೆ ಹೋಗಿದ್ದಳು. ಈ ವೇಳೆ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ವಿಷ ಕುಡಿಸಿರುವ ಆರೋಪ ಕೇಳಿಬಂದಿದೆ. ಬಾಲಕಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಕಳೆದ ರಾತ್ರಿ ಸಾವನ್ನಪ್ಪಿದ್ದಾಳೆ.
ಪಾಣೆಗಾಂವ್ ಗ್ರಾಮದ ಸುನಿಲ್, ಸ್ನೇಹಿತನ ವಿರುದ್ಧ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಹಳೆ ವೈಷಮ್ಯದಿಂದ ವಿಷ ಕುಡಿಸಿ ಹತ್ಯೆ ಮಾಡಿರುವ ಆರೋಪ ಕೇಳಿಬಂದಿದ್ದು, ಫರಹತಬಾದ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.