Categories: ಕಲಬುರಗಿ

ಸಾಮೂಹಿಕ ನಕಲು ; ಪರೀಕ್ಷಾ ಕೇಂದ್ರವೇ ರದ್ದು

ಕಲಬುರಗಿ, -ಬುಧವಾರ ಬೀದರ್ ನ ಪರೀಕ್ಷಾ ಕೇಂದ್ರಗಳಿಗೆ ದಿಢೀರ ಭೇಟಿ ನೀಡಿದ ಗುವಿವಿ ಕುಲಪತಿ ಪ್ರೊ.ದಯಾನಂದ ಅಗಸರ ಅವರು ಪರೀಕ್ಷಾ ಕೇಂದ್ರದಲ್ಲಿ ಸಾಮೂಹಿಕ ನಕಲು ಹಾಗೂ ಪರೀಕ್ಷಾ ಅಕ್ರಮ ನಡೆಯುತ್ತಿರುವುದನ್ನು ಗಮನಿಸಿ, ಎಂ.ಎಸ್. ಇನ್ಸ್ ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜಮೆಂಟ್ ಕಾಲೇಜಿನ (ಕಾಲೇಜು ಕೋಡ್-ಬಿ574) ಪರೀಕ್ಷಾ ಕೇಂದ್ರವನ್ನು ರದ್ದುಪಡಿಸಿದರು. ರದ್ದುಪಡಿಸಿದ ಸದರಿ ಪರೀಕ್ಷಾ ಕೇಂದ್ರದ ವಿದ್ಯಾರ್ಥಿಗಳು ದಿನಾಂಕ 13-08-2021 ರಿಂದ ಮುಂದಿನ ಎಲ್ಲಾ ಪರೀಕ್ಷೆಗಳನ್ನು ಬರೆಯಲು ಬಿವಿಬಿ ಕಾಲೇಜ್ ಕ್ಯಾಂಪಸ್ ನಲ್ಲಿರುವ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹೊಸ ಪರೀಕ್ಷಾ ಕೇಂದ್ರವನ್ನು ನಿಗದಿಪಡಿಸಲಾಯಿತು. ಪರೀಕ್ಷಾ ಕೇಂದ್ರಕ್ಕೆ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರನ್ನು ಆಂತರಿಕ ಹಿರಿಯ ಮೇಲ್ವಿಚಾರಕರು ಹಾಗೂ ಬಿವಿಬಿ ಕಾಲೇಜಿನ ಪ್ರಾಧ್ಯಾಪಕರೊಬ್ಬರನ್ನು ಬಾಹ್ಯ ಹಿರಿಯ ಮೇಲ್ವಿಚಾರಕರಾಗಿ ನೇಮಕ ಮಾಡುವಂತೆ ಸ್ಥಳದಲ್ಲಿಯೇ ಆದೇಶ ನೀಡಿದರು.

ಅದೇರೀತಿ, ನಗರದ ಕವಿರತ್ನ ಕಾಳಿದಾಸ ಪದವಿ ಮಹಾವಿದ್ಯಾಲಯದಲ್ಲಿಯೂ ಸಹ ಪರೀಕ್ಷಾ ಅಕ್ರಮಗಳು ನಡೆಯುತ್ತಿರುವುದನ್ನು ಗಮನಿಸಿ ಎರಡೂ ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರಿಗೆ ಹಾಗೂ ಬಾಹ್ಯ ಹಿರಿಯ ಮೇಲ್ವಿಚಾರಕರಿಗೆ ಎಚ್ಚರಿಕೆ ನೀಡಿ, ಲಿಖಿತ ವಿವರಣೆ ನೀಡಲು ಕುಲಪತಿಗಳು ಸೂಚಿಸಿದರು.

Indresh KC

Recent Posts

ಮರುಬಿಡುಗಡೆಗೆ ತಯಾರಾಗಿದೆ ಉಪೇಂದ್ರ ಅಭಿನಯಿಸಿ, ನಿರ್ದೇಶಿಸಿದ ‘ಎ’ ಸಿನೆಮಾ

ಚುನಾವಣೆ ಹಾಗೂ ಐಪಿಎಲ್ ಕಾರಣದಿಂದ ಹೊಸ ಸಿನಿಮಾಗಳ ಬಿಡುಗಡೆ ಇಲ್ಲವಾದ ಕಾರಣ ಮತ್ತೆ ಹಳೆ ಸಿನಿಮಾ ಬಿಡುಗಡೆ ಮಾಡಲು ನಿರ್ಮಾಪಕರುಗಳು…

37 seconds ago

ಬಸವೇಶ್ವರ ಉದ್ಯಾನವನಕ್ಕೆ ‘ಸಾಂಸ್ಕೃತಿಕ ನಾಯಕ’ ಮರು ನಾಮಕರಣ

ಕರ್ನಾಟಕ ಕಾಲೇಜಿನ ಆವರಣದಲ್ಲಿರುವ ಬಸವೇಶ್ವರ ಉದ್ಯಾನವನಕ್ಕೆ 'ಸಾಂಸ್ಕೃತಿಕ ನಾಯಕ', ಮರು ನಾಮಕರಣದ ಉದ್ಘಾಟನೆಯನ್ನು ಕರ್ನಾಟಕ ಕಾಲೇಜಿನ ಪೌರ ಕಾರ್ಮಿಕ ಮಹಿಳೆ…

7 mins ago

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಸಾಗಾಟ: ಚಾಲಕನಿಗೆ ತರಾಟೆ

ಟೂರಿಸ್ಟ್ ಕಾರಿನಲ್ಲಿ ಮೃತದೇಹ ಕೊಂಡೊಯ್ದ ಘಟನೆಯೊಂದು ಉಡುಪಿ ಜಿಲ್ಲೆಯ ಗಡಿಭಾಗ ಶಿರೂರು ಟೋಲ್ ಗೇಟ್ ಬಳಿ ನಡೆದಿದೆ.

17 mins ago

ಕರ್ನಾಟಕದ ಎಲ್ಲಾ ಭಾಷೆಗಳಲ್ಲಿಯೇ ವೈಶಿಷ್ಟ್ಯ ಪಡೆದ ಲಂಬಾಣಿ ಭಾಷೆ

ರಾಜ್ಯದಲ್ಲಿ ಅತಿ ಹೆಚ್ಚು ಬಳಕೆಯಲ್ಲಿರುವ ಏಳು ಭಾಷೆಗಳ ಪೈಕಿ ಲಂಬಾಣಿ ಭಾಷೆಯೂ ಒಂದಾಗಿದ್ದು, ಕಲ್ಯಾಣ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಈ…

27 mins ago

ಜಿಲ್ಲಾಧಿಕಾರಿಗಳಿಂದ ವಿಶ್ವಗುರು ಬಸವಣ್ಣನಿಗೆ ಪುಷ್ಪ ನಮನ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 891 ಜಯಂತ್ಯೋತ್ಸವ ಅಂಗವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ…

44 mins ago

ಮದುವೆ ಮನೆಯ ಊಟ ಸೇವಿಸಿ ನೂರಾರು ಮಂದಿ ಅಸ್ವಸ್ಥ

ಮದುವೆ ಮನೆಯಲ್ಲಿ ಊಟ ಮಾಡಿದ ನೂರಾರು ಮಂದಿ ಏಕಾಏಕಿ ಅಸ್ವಸ್ಥಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಕಾಲ್ಗೆರೆ ಗ್ರಾಮದಲ್ಲಿ ನಡೆದಿದೆ.

55 mins ago