Categories: ಕಲಬುರಗಿ

ಸ್ವಚ್ಛ ಭಾರತ ಅಭಿಯಾನ ಅಡಿಯಲ್ಲಿ ಚಿತ್ರಕಲೆ, ರಂಗೋಲಿ ಸ್ಪರ್ಧೆ

ಕಲಬುರಗಿ: ಆಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆ ಸ್ವಚ್ಛ ಭಾರತ ಅಭಿಯಾನ ಅಡಿಯಲ್ಲಿ ಕ್ಲೀನ್ ಸಿಟಿ ಗ್ರೀನ್ ಸಿಟಿ ಉದ್ದೇಶದಿಂದ ಸೋಮವಾರ ಇಲ್ಲಿನ ಟೌನ್ ಹಾಲ್ ಬಳಿ ಮಹಾನಗರ ಪಾಲಿಕೆ ಹಾಗೂ ಮನ್ನೂರು ಮಲ್ಟಿಸ್ಪೆಷಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ಚಿತ್ರಕಲೆ ಹಾಗೂ ರಂಗೋಲಿ ಸ್ಪರ್ಧಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

ರಂಗೋಲಿ ಸ್ಪರ್ಧೆಯಲ್ಲಿ ಚಿಕ್ಕ ಮಕ್ಕಳು ಹಾಗೂ ಮಹಿಳೆಯರು ಸೇರಿ ಅನೇಕರು ಸಂಭ್ರಮದಿಂದ ಭಾಗವಹಿಸಿದರು. ಚಿತ್ರಕಲೆ ಸ್ಪರ್ಧೆಯಲ್ಲಿ ಚಿಕ್ಕ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡರು. ಚಿತ್ರಕಲೆ ಹಾಗೂ ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಪ್ರೋತ್ಸಾಹಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ನಳಿನ್ ಅತುಲ್, ಜಿಲ್ಲಾ ಪಂಚಾಯತ್ ಸಿಇಓ ಡಾ. ದೀಲಿಪ್ ಶಶಿ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ ಆಗಮಿಸಿದರು.

ಈ ಸಂದರ್ಭದಲ್ಲಿ ಮುನ್ನೂರು ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಫರುಖ್ ಮನ್ನೂರು, ಎಇಇ ಮುನ್ನಫ ಪಟೇಲ್, ಪರಿಸರ ಅಭಿಯಂತರ ಮೇಲ್ಕೆರಿ ಬಾಬು ಸೇರಿ ಅನೇಕರು ಇದ್ದರು

Sneha Gowda

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

6 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

6 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

7 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

7 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

8 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

9 hours ago