News Karnataka Kannada
Friday, May 10 2024
ಕಲಬುರಗಿ

ಕಲಬುರಗಿ: 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ

minor girlrape
Photo Credit : News Kannada

ಕಲಬುರಗಿ: 12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಂದು (ಜುಲೈ 18) ಘಟನೆ ಬೆಳಕಿಗೆ ಬಂದಿದ್ದು ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

12 ವರ್ಷದ ಬಾಲಕಿ ಜುಲೈ 15 ರಂದು ತನ್ನ ಮನೆಯಿಂದ ಹೊರಟು, ಹತ್ತಿರದಲ್ಲಿ ವಾಸಿಸುತ್ತಿರುವ ತಮ್ಮ ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿ ಹೊರಟಿದ್ದಳು. ಆದ್ರೆ ಎರಡು ಮೂರು ದಿನ ಕಳೆದರೂ ಬಾಲಕಿ ಸಿಕ್ಕಿಲ್ಲ. ಹೀಗಾಗಿ ಮನೆಯವರೆಲ್ಲ ಹುಡುಕಾಡಿದ್ದಾರೆ. ಇಂದು ಗ್ರಾಮದ ಹೊರವಲಯದ ಬಾವಿಯಲ್ಲಿ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಬಾವಿಯಲ್ಲಿ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಆಳಂದ ಪೊಲೀಸ್ ಠಾಣೆಯಲ್ಲಿ ಪೋಸ್ಕೋ ಪ್ರಕರಣ ದಾಖಲಾಗಿದ್ದು ಆರೋಪಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು